Share News

ಇದೇ ಮಾರ್ಚ್ 31ರಂದು ಸಿದ್ದಿವಿನಾಯಕ ಲೇಔಟ್ ನಿವಾಸಿಯೊಬ್ಬರು ತಮ್ಮ ಸ್ಕೂಟರ್‌ನಲ್ಲಿದ್ದ ಮೊಬೈಲ್ ಫೋನ್ ಕಳವಾಗಿರುವ ಬಗ್ಗೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಹಾಗೂ ತಾಂತ್ರಿಕ ತನಿಖೆಯ ಮೂಲಕ ಕೇವಲ ಎರಡು ಗಂಟೆಗಳ ಅವಧಿಯಲ್ಲಿ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ವಿಚಾರಣೆಯ ವೇಳೆ ಆರೋಪಿಯು ತನ್ನ ತಪ್ಪನ್ನು ಒಪ್ಪಿಕೊಂಡು ಮೊಬೈಲ್ ಫೋನ್ ಅನ್ನು ಹಿಂತಿರುಗಿಸಿದ್ದು, ಪೊಲೀಸರು ಅದನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಪೊಲೀಸರ ಈ ತ್ವರಿತ ಮತ್ತು ವೃತ್ತಿಪರ ಕ್ರಮವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್


Share News