ಅಮೃತಹಳ್ಳಿಯ ಕೆಂಪಾಪುರದಲ್ಲಿ ಮನೆಯ ಹೊರಗಿನ ಶೂ ರ್ಯಾಕ್‌ನಲ್ಲಿಟ್ಟಿದ್ದ ಬೀಗದ ಕೀಯನ್ನು ಬಳಸಿ ಒಳಪ್ರವೇಶಿಸಿ, ಸುಮಾರು 100 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಹೊರರಾಜ್ಯದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯವರು ಕೆಲಸಕ್ಕೆ ಮತ್ತು ಮಕ್ಕಳು ಶಾಲೆಗೆ ಹೋಗಿದ್ದ ಸಂದರ್ಭವನ್ನು ಬಳಸಿಕೊಂಡು ಈ ಕೃತ್ಯ ಎಸಗಲಾಗಿತ್ತು.
ದೂರು ದಾಖಲಾದ ನಂತರ ತನಿಖೆ ಕೈಗೊಂಡ ಅಮೃತಹಳ್ಳಿ ಪೊಲೀಸರು, ಆರೋಪಿಯನ್ನು ಕೆಂಪಾಪುರದ ಶಾಲೆಯೊಂದರ ಬಳಿ ಬಂಧಿಸಿ ಆತ ನೀಡಿದ ಮಾಹಿತಿಯ ಮೇರೆಗೆ ಚಿಕ್ಕಪೇಟೆ ಮತ್ತು ರಾಮಮೂರ್ತಿ ನಗರದ ಜ್ಯೂವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡಲಾಗಿದ್ದ 15 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಡಿಸಿಪಿ ಶ್ರೀ. ಮಿಥುನ್ ಕುಮಾರ್ ಜಿ.ಕೆ ರವರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಶ್ರೀ. ಅಂಬರೀಶ್ ಎಂ ಮತ್ತು ಅವರ ತಂಡ ಯಶಸ್ವಿಯಾಗಿ ಪೂರೈಸಿದೆ.
ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA