Share News

ಕೆ ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶೀಗೇಹಳ್ಳಿಯ ಮಹಿಳೆಯೊಬ್ಬರಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ, ಕಳೆದ ಒಂದೂವರೆ ವರ್ಷದಿಂದ ಆತ್ಮೀಯತೆ ಬೆಳೆಸಿಕೊಂಡಿದ್ದ ಇಬ್ಬರು ವ್ಯಕ್ತಿಗಳು ನಂತರ ಅವರಿಗೆ ಬೆದರಿಕೆ ಹಾಕಿ ಚಿನ್ನಾಭರಣ ಮತ್ತು ನಗದನ್ನು ಸುಲಿಗೆ ಮಾಡಿದ್ದರು. ಈ ಬಗ್ಗೆ ಫೆಬ್ರವರಿ 10, 2026 ರಂದು ದೂರು ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮಾರ್ಚ್ 3 ರಂದು ತೆಲಂಗಾಣದ ನಿಜಾಮಾಬಾದ್‌ನಲ್ಲಿ ಒಬ್ಬ ಆರೋಪಿಯನ್ನು ಮತ್ತು ಮಾರ್ಚ್ 19 ರಂದು ಆಂಧ್ರಪ್ರದೇಶದ ಅನಂತಪುರದಲ್ಲಿ ಮತ್ತೊಬ್ಬ ಸಹಚರನನ್ನು ಬಂಧಿಸಿದ್ದಾರೆ. ಆರೋಪಿಗಳು ನೀಡಿದ ಮಾಹಿತಿಯಂತೆ ಹೈದರಾಬಾದ್‌ನ ಎರಡು ಬ್ಯಾಂಕ್ ಹಾಗೂ ಒಂದು ಜ್ಯುವೆಲ್ಲರಿ ಅಂಗಡಿಯಲ್ಲಿ ಅಡಮಾನವಿಟ್ಟಿದ್ದ ಒಟ್ಟು 571 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ ಅಂದಾಜು 85.65 ಲಕ್ಷ ಎಂದು ತಿಳಿದುಬಂದಿದೆ.

ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಶ್ರೀ ಸೈದುಲು ಅಡಾವತ್ ಮತ್ತು ಎಸಿಪಿ ಶ್ರೀಮತಿ ರೀನಾ ಸುವರ್ಣ ಅವರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಶ್ರೀ. ರಾಮಮೂರ್ತಿ ಹಾಗೂ ತಂಡವು ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್


Share News