Share News

ಗೌರಿಬಿದನೂರು: ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವೊಂದನ್ನು ಅತ್ಯಂತ ವೇಗವಾಗಿ ಭೇದಿಸುವಲ್ಲಿ ಗೌರಿಬಿದನೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖದೀಮರನ್ನು ಬಂಧಿಸಿರುವ ಪೊಲೀಸರು, ಅವರಿಂದ ಕಳವು ಮಾಡಲಾಗಿದ್ದ ಸಂಪೂರ್ಣ ಮಾಲನ್ನು ವಶಪಡಿಸಿಕೊಂಡಿದ್ದಾರೆ.

​ನಗರ ಠಾಣೆಯ ಮೊಕದ್ದಮೆ ಸಂಖ್ಯೆ 120/2026 ರ ಅಡಿಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದ ಬೆನ್ನಟ್ಟಿದ ಪೊಲೀಸರು, ಖಚಿತ ಮಾಹಿತಿ ಹಾಗೂ ತನಿಖಾ ಕೌಶಲ್ಯದ ಆಧಾರದ ಮೇಲೆ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಕಳವು ಮಾಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು (ಮಾಲು) ಸುರಕ್ಷಿತವಾಗಿ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ದೂರು ದಾಖಲಾದ ಕೆಲವೇ ದಿನಗಳಲ್ಲಿ ತನಿಖೆಯನ್ನು ಚುರುಕುಗೊಳಿಸಿ, ಆರೋಪಿಗಳನ್ನು ಬಂಧಿಸುವ ಜೊತೆಗೆ ಕಳವು ಮಾಲನ್ನು ಯಶಸ್ವಿಯಾಗಿ ವಶಪಡಿಸಿಕೊಂಡ ಗೌರಿಬಿದನೂರು ನಗರ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಮುಕ್ತಕಂಠದಿಂದ ಶ್ಲಾಘಿಸಿ, ಅಭಿನಂದಿಸಿದ್ದಾರೆ.

 


Share News