Share News

ಬೆಂಗಳೂರು: ನಗರದ ಥಣಿಸಂದ್ರ ಪ್ರದೇಶದಲ್ಲಿರುವ ಕಾರುಗಳ ಗ್ಯಾರೇಜ್ ಒಂದರಲ್ಲಿ ಇಂದು ಬೆಳಗಿನ ಜಾವ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸುಟ್ಟು ಕರಕಲಾಗಿವೆ.

ಇಂದು ಬೆಳಗಿನ ಜಾವ ಸುಮಾರು 5 ಗಂಟೆಯ ವೇಳೆಗೆ ಗ್ಯಾರೇಜ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆ ಸುತ್ತಲೂ ವ್ಯಾಪಿಸಿದ್ದು, ಪರಿಣಾಮ ಗ್ಯಾರೇಜ್‌ನಲ್ಲಿ ರಿಪೇರಿ ಹಾಗೂ ಸೇವೆಗೆಂದು ನಿಲ್ಲಿಸಲಾಗಿದ್ದ ದುಬಾರಿ ಬೆಲೆಯ ಐಷಾರಾಮಿ ಕಾರುಗಳು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿವೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ 5 ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದಿದ್ದಾರೆ.

​ಈ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬರಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Share News