Share News

ಬೆಂಗಳೂರು: ಸ್ವಂತ ಬಳಕೆಗಾಗಿ (ಸಾರೇತರ ವರ್ಗದಲ್ಲಿ) ನೋಂದಣಿ ಮಾಡಿಸಿಕೊಂಡಿದ್ದ ದ್ವಿಚಕ್ರ ವಾಹನಗಳನ್ನು ನಿಯಮಬಾಹಿರವಾಗಿ ವಾಣಿಜ್ಯ ಉದ್ದೇಶಕ್ಕಾಗಿ (ಬೈಕ್ ಟ್ಯಾಕ್ಸಿ) ಬಳಸುತ್ತಿದ್ದ ವಾಹನಗಳ ವಿರುದ್ಧ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ.

​ವಿಶೇಷ ತಪಾಸಣಾ ಅಭಿಯಾನದ ಭಾಗವಾಗಿ 2026ರ ಆಗಸ್ಟ್ 05ರಂದು ನಗರದ ವಿವಿಧೆಡೆ ನಡೆಸಿದ ದಿಢೀರ್ ತಪಾಸಣೆ ವೇಳೆ, ಕಾನೂನು ಉಲ್ಲಂಘಿಸಿ ಅನಧಿಕೃತವಾಗಿ ರಸ್ತೆಗಿಳಿದಿದ್ದ ಒಟ್ಟು 263 ದ್ವಿಚಕ್ರ ವಾಹನಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

​ಖಾಸಗಿ ವಾಹನಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಸಾರಿಗೆ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಮುಂಬರುವ ದಿನಗಳಲ್ಲೂ ಕಟ್ಟುನಿಟ್ಟಿನ ಕ್ರಮ ಹಾಗೂ ತಪಾಸಣಾ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಇಲಾಖೆ ಎಚ್ಚರಿಸಿದೆ.


Share News