Share News

ಬೆಂಗಳೂರು: ರಸ್ತೆಯಲ್ಲಿ ಜಾನುವಾರುಗಳನ್ನು ಉಡಾಫೆಯಿಂದ ಬಿಟ್ಟು, ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡಚಣೆ ಉಂಟುಮಾಡಿದ ಹಿನ್ನೆಲೆಯಲ್ಲಿ ಹಸುವಿನ ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ (FIR) ದಾಖಲಿಸಿದ್ದಾರೆ.

​ಇಲ್ಲಿನ ಕಲಾಮಂದಿರ ರಸ್ತೆಯಲ್ಲಿ ಸುಮಾರು 8 ರಿಂದ 10 ಹಸುಗಳು ರಸ್ತೆಯುದ್ದಕ್ಕೂ ಎಲ್ಲೆಂದರಲ್ಲಿ ಓಡಾಡುತ್ತಿದ್ದವು. ಇದರಿಂದಾಗಿ ವಾಹನ ಸವಾರರು ಸಂಚರಿಸಲಾಗದೆ ಕಳಾಮಂದಿರ ಮಾರ್ಗದಲ್ಲಿ ಬೃಹತ್ ಮಟ್ಟದ ಟ್ರಾಫಿಕ್ ಜಾಮ್ ಉಂಟಾಗಿತ್ತು.

​ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಹಿನ್ನೆಲೆಯಲ್ಲಿ ಹಸುಗಳ ಮಾಲೀಕ ಸಂತೋಷ್ ಎಂಬುವವರ ವಿರುದ್ಧ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾನೂನು ಕ್ರಮ ಜರುಗಿಸಿ, ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಸಾರ್ವಜನಿಕ ರಸ್ತೆಗಳಲ್ಲಿ ಜಾನುವಾರುಗಳನ್ನು ನಿಯಂತ್ರಣವಿಲ್ಲದೆ ಬಿಡುವುದರಿಂದ ಅಪಘಾತ ಹಾಗೂ ಸಂಚಾರ ದಟ್ಟಣೆ ಉಂಟಾಗುತ್ತದೆ, ಹೀಗಾಗಿ ಮಾಲೀಕರು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


Share News