ತುಮಕೂರು: ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರ ಸೇವಿಸಿದ ಬಳಿಕ ಸುಮಾರು 12 ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಣೆಚಂಡೂರಿನಲ್ಲಿ ನಡೆದಿದೆ.
ಮಣೆಚಂಡೂರಿನಲ್ಲಿರುವ ‘ರಾಣಿ ಚೆನ್ನಮ್ಮ ವಸತಿ ಶಾಲೆ’ಯಲ್ಲಿ ಬೆಳಿಗ್ಗೆ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗೆ ಉಪಾಹಾರಕ್ಕಾಗಿ ಚಿತ್ರಾನ್ನ ನೀಡಲಾಗಿತ್ತು.
ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು:
ಚಿತ್ರಾನ್ನ ಸೇವಿಸಿದ ಕೆಲವೇ ಸಮಯದಲ್ಲಿ ವಿದ್ಯಾರ್ಥಿಗಳಲ್ಲಿ ತೀವ್ರ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಎಚ್ಚೆತ್ತ ಶಾಲೆಯ ಸಿಬ್ಬಂದಿ ಹಾಗೂ ಸ್ಥಳೀಯರು ಅಸ್ವಸ್ಥಗೊಂಡ 12 ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಆಸ್ಪತ್ರೆಯಲ್ಲಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಗೆ ಆಹಾರ ಕಲುಷಿತಗೊಂಡಿರುವುದೇ ಕಾರಣವೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA