Share News

ರಾಮನಗರ / ಬಿಡದಿ: ತಾಲ್ಲೂಕಿನ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ಕೇತಗಾನಹಳ್ಳಿ ಗ್ರಾಮದ ಬಳಿ ಅಕ್ರಮವಾಗಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

​ಧನುಷ್ ಬಂಧಿತ ಆರೋಪಿ.

​ಕಾರ್ಯಾಚರಣೆಯ ವಿವರ:

ಕೇತಗಾನಹಳ್ಳಿ ಬಳಿ ಮಾದಕ ವಸ್ತು ಮಾರಾಟವಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸುತ್ತಿದ್ದಂತೆ, ಬಿಡದಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡವು ಪಂಚರೊಂದಿಗೆ ತಕ್ಷಣ ಸ್ಥಳಕ್ಕೆ ತೆರಳಿ ಮಿಂಚಿನ ದಾಳಿ ನಡೆಸಿದೆ. ಕಾರ್ಯಾಚರಣೆ ವೇಳೆ ಆರೋಪಿ ಧನುಷ್‌ನನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ ₹940 ಗ್ರಾಂ ತೂಕದ ಮಾದಕ ವಸ್ತುವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

​ಪ್ರಕರಣ ದಾಖಲು:

ಘಟನೆಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 294/2026, ಕಲಂ 20(ಬಿ), (ii)(A) ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

​ಸಾರ್ವಜನಿಕರಲ್ಲಿ ಮನವಿ:

ಮಾದಕ ವಸ್ತುಗಳ ಅಕ್ರಮ ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು. ನಿಮ್ಮ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಕುರಿತು ಯಾವುದೇ ಮಾಹಿತಿ ಇದ್ದಲ್ಲಿ ತಕ್ಷಣವೇ ಪೊಲೀಸರಿಗೆ ತಿಳಿಸಬೇಕಾಗಿ ಕೋರಲಾಗಿದೆ.


Share News