Share News

ಮೈಸೂರು: ವಿದ್ಯಾರ್ಥಿಯೊಬ್ಬನಿಗೆ ಭೀಕರವಾಗಿ ಥಳಿಸಿ ಗಾಯಗೊಳಿಸಿದ ಆರೋಪದ ಮೇಲೆ ಸೆಂಟ್ ಫಿಲೋಮಿನಾ ಶಾಲೆಯ ಶಿಕ್ಷಕ ಸುರೇಶ್ ಎಂಬುವವರ ವಿರುದ್ಧ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

​ರೆಹಾನ್ ಷರೀಫ್ (16) ಹಲ್ಲೆಗೊಳಗಾದ ಬಾಲಕ. ಶಿಕ್ಷಕ ಮುಷ್ಟಿಯಿಂದ ಆತನ ಕಣ್ಣಿನ ಭಾಗಕ್ಕೆ ಜೋರಾಗಿ ಹೊಡೆದಿದ್ದರಿಂದ ಕಣ್ಣಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಅದೃಷ್ಟವಶಾತ್ ವಿದ್ಯಾರ್ಥಿ ಪ್ರಾಣಾಪಾಯ ಹಾಗೂ ಗಂಭೀರ ಅನಾಹುತದಿಂದ ಪಾರಾಗಿದ್ದಾನೆ.

​ಟಿಸಿ ನೀಡುವುದಾಗಿ ಬೆದರಿಕೆ:

ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಶಾಲೆಯಿಂದ ಟ್ರಾನ್ಸ್‌ಫರ್ ಸರ್ಟಿಫಿಕೇಟ್ (TC) ನೀಡಿ ಹೊರಹಾಕುವುದಾಗಿ ಶಿಕ್ಷಕ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ವಿದ್ಯಾರ್ಥಿಯ ತಂದೆ ವಾಸಿಮ್ ಷರೀಫ್ ಅವರು ಲಷ್ಕರ್ ಪೊಲೀಸ್ ಠಾಣೆಗೆ ತೆರಳಿ ಶಿಕ್ಷಕ ಸುರೇಶ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ.


Share News