ಚಿತ್ರದುರ್ಗ: ಶ್ರೀಕೃಷ್ಣ ಜಯಂತಿ ಆಚರಣೆಯ ವೇಳೆ ಡಿಜೆ (DJ) ಬಳಸಲು ಅನುಮತಿ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯೂರು ನಗರ ಪೊಲೀಸರು ಐವರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
ಪ್ರಕರಣದ ವಿವರ:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಸೆಪ್ಟೆಂಬರ್ 12ರಂದು ಶ್ರೀಕೃಷ್ಣ ಜಯಂತಿ ಆಚರಣೆಯ ಅಂಗವಾಗಿ ಡಿಜೆ ಬಳಕೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಯಾದವ ಸಮುದಾಯದ ಯುವಕರು ರಾಷ್ಟ್ರೀಯ ಹೆದ್ದಾರಿ-48ರಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು.
ಇದರ ಜೊತೆಗೆ ನಿಯಮ ಮೀರಿ ಹೆಚ್ಚುವರಿ ಶಬ್ದ (Sound) ಬಳಸಿ ಮೆರವಣಿಗೆ ನಡೆಸಿದ ಆರೋಪವೂ ಕೇಳಿಬಂದಿತ್ತು. ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಹಾಗೂ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸ್ ಕಾರ್ಯಾಚರಣೆ:
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ಸೋಮವಾರ ಸಂಜೆ ಐವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.
Arakshakara Times Media
Related posts
