Share News

ಮಂಡ್ಯ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಹಾಗೂ ಫಾರಂ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭರ್ಜರಿ ದಾಳಿ ನಡೆಸಿದ್ದಾರೆ.

​ಕಳೆದ ತಿಂಗಳಷ್ಟೇ ಮದ್ದೂರಿನಲ್ಲಿ ನಿವೃತ್ತರಾಗಿದ್ದ ಶಿವರಾಜು ಅವರ ಮದ್ದೂರಿನ ವಿನಾಯಕ ಬಡಾವಣೆಯಲ್ಲಿರುವ ಮನೆ ಹಾಗೂ ಅವಸರಹಳ್ಳಿಯಲ್ಲಿದ್ದ ಫಾರಂ ಹೌಸ್‌ಗಳ ಮೇಲೆ ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

​ಅಕ್ರಮ ಸಾಮಗ್ರಿ ಸಂಗ್ರಹ ಆರೋಪ:

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತಲುಪಬೇಕಿದ್ದ ಸರ್ಕಾರಿ ಸಾಮಗ್ರಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿದ್ದರು ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಪರಿಶೀಲನೆ ವೇಳೆ ಮನೆಯಲ್ಲಿ ಅಪಾರ ಪ್ರಮಾಣದ ದುಬಾರಿ ಮದ್ಯದ ಬಾಟಲಿಗಳು, ಭಾರಿ ಪ್ರಮಾಣದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳು ಪತ್ತೆಯಾಗಿವೆ.

​ಇನ್ಸ್‌ಪೆಕ್ಟರ್ ಬ್ಯಾಟರಾಯಗೌಡ ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಶೋಧ ಕಾರ್ಯ ಕೈಗೊಂಡಿದ್ದು, ಪತ್ತೆಯಾಗಿರುವ ಆಸ್ತಿಪಾಸ್ತಿ, ಮದ್ಯ ಹಾಗೂ ಪ್ರಮುಖ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.


Share News