Share News

ರಾಮನಗರ: ಕಾರಿನಲ್ಲಿ ಮಲಗಿದ್ದ ಕ್ಯಾಬ್ ಚಾಲಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಪ್ಪ ಸರ್ಕಲ್ ಬಳಿ ನಡೆದಿದೆ.

​ಬೆಂಗಳೂರಿನ ಕೆ.ಪಿ. ಅಗ್ರಹಾರ ಮೂಲದ ಪುಷ್ಪರಾಜ್ (29) ಮೃತಪಟ್ಟ ಕ್ಯಾಬ್ ಚಾಲಕ.

​ಗ್ರಾಹಕರನ್ನು ಡ್ರಾಪ್ ಮಾಡಿದ ನಂತರ ಪುಷ್ಪರಾಜ್ ಅವರು ಪಕ್ಕದ ಲೇಔಟ್‌ನಲ್ಲಿ ಕಾರನ್ನು ಪಾರ್ಕ್ ಮಾಡಿ ವಿಶ್ರಾಂತಿಗಾಗಿ ಮಲಗಿದ್ದರು ಎನ್ನಲಾಗಿದೆ. ಬೆಳಗ್ಗಿನಿಂದಲೂ ಕಾರು ಒಂದೇ ಜಾಗದಲ್ಲಿ ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಅನುಮಾನಗೊಂಡು ಪರಿಶೀಲಿಸಿದಾಗ, ಕಾರಿನೊಳಗೆ ಚಾಲಕ ಶವವಾಗಿ ಪತ್ತೆಯಾಗಿದ್ದಾರೆ.

​ಹೃದಯಾಘಾತದಿಂದ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ತಾವರೆಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ವರದಿ : ಗಿಲ್ಬರ್ಟ್. ಜೆ 


Share News