ಚಿಕ್ಕಬಳ್ಳಾಪುರ: ಜಿಲ್ಲೆಯ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸ್ಫೋಟಕಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 150 ನಾಡಬಾಂಬ್ಗಳು ಹಾಗೂ 1 ನಾಡಬಂದೂಕನ್ನು ಜಪ್ತಿ ಮಾಡಿದ್ದಾರೆ.
ಆರೋಪಿ ಬಂಧನ ಮತ್ತು ತನಿಖೆ
ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷದ ನರಸಿಂಹಪ್ಪ ಎಂಬ ವ್ಯಕ್ತಿಯನ್ನು ಬಟ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಸ್ಫೋಟಕ ಹಾಗೂ ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಳ್ಳಲು ಮೂಲ ಕಾರಣವೇನು? ಇವುಗಳನ್ನು ಬೇಟೆಗೆ ಬಳಸಲು ಸಂಗ್ರಹಿಸಲಾಗಿತ್ತೇ ಅಥವಾ ಬೇರೇನಾದರೂ ಅಪರಾಧ ಕೃತ್ಯದ ಸಂಚು ಇತ್ತೇ? ಎಂಬಿತ್ಯಾದಿ ಕೋನಗಳಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಬಂಧಿತ ಆರೋಪಿಯಿಂದ ಬಂದೂಕು ಮತ್ತು ಬಾಂಬ್ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
Arakshakara Times Media
Related posts
