ಬಂಗಾರಪೇಟೆ / ಕಾಮಸಮುದ್ರಂ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸುವಲ್ಲಿ ಕಾಮಸಮುದ್ರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತನಿಂದ ಸುಮಾರು ₹28,000 ಮೌಲ್ಯದ 580 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬತ್ತಲಹಳ್ಳಿ ಗ್ರಾಮದ ನಿವಾಸಿ ಸಂತೋಷ್ ಕುಮಾರ್ (37) ಬಂಧಿತ ಆರೋಪಿಯಾಗಿದ್ದಾನೆ.
ಕಾರ್ಯಾಚರಣೆಯ ವಿವರ:
ಅಕ್ಟೋಬರ್ 23 ರಂದು ಕಾಮಸಮುದ್ರಂ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಪೊನ್ನಾಂಡಹಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಸುಳಿವಿನ ಮೇರೆಗೆ ತಕ್ಷಣವೇ ಕಾರ್ಯಪ್ರವೃತ್ತರಾದ ಕಾಮಸಮುದ್ರಂ ಸಿಪಿಐ ನಂಜಪ್ಪ ಎಂ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 580 ಗ್ರಾಂ ಗಾಂಜಾವನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪೊಲೀಸ್ ತಂಡಕ್ಕೆ ಎಸ್ಪಿ ಶ್ಲಾಘನೆ:
ಡಿವೈಎಸ್ಪಿ ವಿ. ಲಕ್ಷ್ಮಯ್ಯ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.
ದಾಳಿಯಲ್ಲಿ ಭಾಗವಹಿಸಿದ್ದ ಸಿಪಿಐ ನಂಜಪ್ಪ ಎಂ, ಪೊಲೀಸ್ ಉಪನಿರೀಕ್ಷಕ ಕಿರಣ್ ಕುಮಾರ್ ಬಿ.ವಿ., ಪ್ರೊ.ಪಿಎಸ್ಐ ಶರತ್ ಪಿ ಹಾಗೂ ಸಿಬ್ಬಂದಿಗಳಾದ ರಾಜೇಂದ್ರ, ರಾಮರಾವ್, ಮಂಜುನಾಥ, ಲಕ್ಷ್ಮಣತೇಲಿ, ಅಭಿಷೇಕ್ ಮತ್ತು ಚಾಲಕ ಧನಂಜಯ್ ಅವರ ಸಮಯೋಚಿತ ಕಾರ್ಯವೈಖರಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶಿವಾಂಶು ರಜಪೂತ್ ಅಭಿನಂದಿಸಿ ಶ್ಲಾಘಿಸಿದ್ದಾರೆ.
Arakshakara Times Media
Related posts
