ಶಿವಮೊಗ್ಗ: ನಗರ ಹಾಗೂ ಜಿಲ್ಲಾದ್ಯಂತ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಸಮರ ಸಾರಿರುವ ಶಿವಮೊಗ್ಗ ಸಂಚಾರ ಪೊಲೀಸರು, ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುತ್ತಿದ್ದ ಬೈಕ್ ಸವಾರರ ವಿರುದ್ಧ ಖಡಕ್ ಕಾರ್ಯಾಚರಣೆ ನಡೆಸಿದ್ದಾರೆ.
ಸಿಪಿಐ (CPI) ದೇವರಾಜ್ ಅವರ ನೇತೃತ್ವದಲ್ಲಿ ನಡೆದ ಈ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ, ಯಾವುದೇ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಇಲ್ಲದೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಒಟ್ಟು 72 ದ್ವಿಚಕ್ರ ವಾಹನಗಳನ್ನು ತಡೆದು ಪರಿಶೀಲಿಸಲಾಗಿದೆ. ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆ (IMV Act) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
ರಸ್ತೆ ಸುರಕ್ಷತೆಯನ್ನು ಕಾಯ್ದುಕೊಳ್ಳುವ ಜೊತೆಗೆ ಅಪರಾಧ ಚಟುವಟಿಕೆಗಳಿಗೆ ತಡೆ ಒಡ್ಡುವ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ನಿಯಮ ಬಾಹಿರವಾಗಿ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಲಾಯಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Arakshakara Times Media
Related posts
