ಶನಿವಾರಸಂತೆ: ಶನಿವಾರಸಂತೆ ಪೊಲೀಸ್ ಠಾಣಾ ಸರಹದ್ದಿನ ಬಿಕ್ಕೊಳತ್ತೂರು ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಅಸ್ಸಾಂ ಮೂಲದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ದಿನಾಂಕ 24-10-2026 ರಂದು ಸಂಜೆ 5:00 ಗಂಟೆಯ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ಶನಿವಾರಸಂತೆ ಪೊಲೀಸರು ಬಿಕ್ಕೊಳತ್ತೂರು ಬಸ್ ನಿಲ್ದಾಣದ ಬಳಿ ದಿಢೀರ್ ದಾಳಿ ನಡೆಸಿದರು. ಈ ವೇಳೆ ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಬ್ಯಾಗ್ನಲ್ಲಿ ಅಕ್ರಮವಾಗಿ ಗಾಂಜಾ ಇಟ್ಟುಕೊಂಡು ಸಾಗಿಸುತ್ತಿದ್ದುದು ಕಂಡುಬಂದಿದೆ.
ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ಆತನ ವಿರುದ್ಧ ಎನ್ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತದನಂತರ ಆರೋಪಿಯನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದೇ ವೇಳೆ ಸಾರ್ವಜನಿಕರು ಹಾಗೂ ಯುವಜನತೆಗೆ ಜಾಗೃತಿ ಸಂದೇಶ ನೀಡಿರುವ ಪೊಲೀಸರು, “ಕ್ಷಣಿಕ ಮೋಜಿಗಾಗಿ ಮಾದಕ ವಸ್ತುಗಳಿಗೆ ಬಲಿಯಾಗಬೇಡಿ. ಮಾದಕ ದ್ರವ್ಯಗಳಿಂದ ದೂರವಿದ್ದು, ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ” ಎಂದು ಮನವಿ ಮಾಡಿದ್ದಾರೆ.
Arakshakara Times Media
Related posts
