Share News

ಮೈಸೂರು: ಮುಂಬರುವ 2026ರ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ತಾತ್ಕಾಲಿಕ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ರಹದಾರಿ (ಅನುಮತಿ) ನೀಡುವುದು ಹಾಗೂ ಅಗತ್ಯ ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಇಂದು ಮಹತ್ವದ ಸಮನ್ವಯ ಸಭೆ ಜರುಗಿತು.

​ಡಿಸಿಪಿ ಡಾ. ಹರ್ಷ ಪ್ರಿಯಂವದಾ ಐಪಿಎಸ್ ಹಾಗೂ ಡಿಸಿಪಿ ಶ್ರೀ ಸುಂದರ್ ರಾಜ್ ಅವರ ಜಂಟಿ ಅಧ್ಯಕ್ಷತೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು.

​ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕಂ) ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

​ಸಭೆಯ ಮುಖ್ಯ ಚರ್ಚಾ ವಿಷಯಗಳು:

​ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ: ಪಟಾಕಿ ಮಳಿಗೆಗಳ ಸ್ಥಾಪನೆಗೆ ಅನುಮತಿ ನೀಡುವ ಮುನ್ನ ಅಗ್ನಿಶಾಮಕ ಇಲಾಖೆ ಮತ್ತು ಪಾಲಿಕೆಯ ಸುರಕ್ಷತಾ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಅನುಸರಿಸುವುದು.

​ಅಪಾಯ ರಹಿತ ವಾತಾವರಣ: ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಸ್ಥಳ ನಿಯೋಜನೆ ಹಾಗೂ ತುರ್ತು ಪರಿಸ್ಥಿತಿ ಎದುರಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿದರು.


Share News