Subscribe Now
Trending News

Author: Arakshakara Times Media

ಕ್ರೈಂ ಸುದ್ದಿಗಳು

ಹುಬ್ಬಳ್ಳಿಯಲ್ಲಿ ಮಿತಿಮೀರಿದ ‘ರೋಡ್ ರೋಮಿಯೋ’ಗಳ ಹಾವಳಿ: ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ ಮೆರೆಯುತ್ತಿರುವ ಪುಂಡರು! 

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಿಡಿಗೇಡಿಗಳ ಅಸಭ್ಯ ವರ್ತನೆ ಮಿತಿಮೀರಿದ್ದು, ಸಾರ್ವಜನಿಕ ರಸ್ತೆಯಲ್ಲಿ ಓಡಾಡುವ ಯುವತಿಯರು ಮತ್ತು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಬೈಕ್‌ಗಳಲ್ಲಿ ಬರುವ ಪುಂಡರು ಯುವತಿಯರ ಅಂಗಾಂಗಗಳನ್ನು ಮುಟ್ಟಿ ಪರಾರಿಯಾಗುತ್ತಿರುವ ಆತಂಕಕಾರಿ ಘಟನೆಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾರ್ವಜನಿಕ...
ರಾಜಕೀಯ ಸುದ್ದಿಗಳು

ಪ್ರಧಾನಿ ಮೋದಿ ವಿರುದ್ಧ ಖರ್ಗೆ ‘ಭಯೋತ್ಪಾದಕ’ ಪದ ಬಳಕೆ: ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದ ವಿವಾದಾತ್ಮಕ ಹೇಳಿಕೆ! 

ಚೆನ್ನೈ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ “ಭಯೋತ್ಪಾದಕ” ಎಂಬ ಪದವನ್ನು ಬಳಸುವ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ನೀಡಿದ ಈ ಹೇಳಿಕೆ ಈಗ ದೇಶಾದ್ಯಂತ...
ಕ್ರೈಂ ಸುದ್ದಿಗಳು

ಕಾಗವಾಡ: ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರು ರೌಡಿ ಶೀಟರ್‌ಗಳು ಜಿಲ್ಲೆಯಿಂದ ಗಡಿಪಾರು! 

ಬೆಳಗಾವಿ: ಸಮಾಜದ ಶಾಂತಿ ಮತ್ತು ಸ್ವಾಸ್ಥ್ಯಕ್ಕೆ ಧಕ್ಕೆ ತರುತ್ತಿದ್ದ ಆರೋಪಿಗಳ ವಿರುದ್ಧ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ (ಎಸ್ಪಿ ರಾಮರಾಜ ಆದೇಶದಂತೆ) ಕಠಿಣ ಕ್ರಮ ಕೈಗೊಂಡಿದ್ದು, ಕಾಗವಾಡ ವ್ಯಾಪ್ತಿಯ ಇಬ್ಬರು ರೌಡಿ ಶೀಟರ್‌ಗಳನ್ನು ಜಿಲ್ಲೆಯಿಂದ ಹೊರಕ್ಕೆ ಗಡಿಪಾರು...
ಜಿಲ್ಲಾ ಸುದ್ದಿಗಳು

ಬೆಂಗಳೂರು ಗ್ರಾಮಾಂತರ: ಬಾಲ್ಯವಿವಾಹ ತಡೆಗೆ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆ; ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಖಚಿತ! 

ಬೆಂಗಳೂರು: ಅಕ್ಷಯ ತೃತೀಯ ಮತ್ತು ಬಸವ ಜಯಂತಿಯಂತಹ ಶುಭ ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಗಳಿದ್ದು, ಇದನ್ನು ತಡೆಗಟ್ಟಲು ಸಾರ್ವಜನಿಕರು ಹಾಗೂ ಅಧಿಕಾರಿಗಳು ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಕಟ್ಟುನಿಟ್ಟಿನ ಆದೇಶ...
ಜಿಲ್ಲಾ ಸುದ್ದಿಗಳು

ಮೈಸೂರು: ಮುಡಾದಿಂದ ಬೃಹತ್ ಕಾರ್ಯಾಚರಣೆ; ದೇವನೂರು ಗ್ರಾಮದಲ್ಲಿ ಅನಧಿಕೃತ ಒತ್ತುವರಿ ತೆರವು 

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ನಗರದ ಹೊರವಲಯದಲ್ಲಿ ಭೂಗಳ್ಳರ ವಿರುದ್ಧ ಸಮರ ಸಾರಿದ್ದು, ದೇವನೂರು ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದೆ. ಮೈಸೂರು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ದೇವನೂರು ಗ್ರಾಮದ...
ಜಿಲ್ಲಾ ಸುದ್ದಿಗಳು

ನಕ್ಷೆಯಲ್ಲೇ ಇಲ್ಲದ ರಸ್ತೆಗೆ ₹5 ಲಕ್ಷ ಸ್ವಾಹಾ? ಉದಗಟ್ಟಿಯಲ್ಲಿ ‘ಸರ್ಕಾರಿ’ ಹಣಕ್ಕೆ ಕನ್ನ! 

ರಾಣೇಬೆನ್ನೂರು: ಸರ್ಕಾರದ ನಿಯಮಗಳನ್ನು ಅಕ್ಷರಶಃ ಗಾಳಿಗೆ ತೂರಿ, ಸಾರ್ವಜನಿಕರ ತೆರಿಗೆ ಹಣವನ್ನು ಹಾಡಹಗಲೇ ಲೂಟಿ ಮಾಡುತ್ತಿರುವ ಆಘಾತಕಾರಿ ಪ್ರಕರಣ ತಾಲೂಕಿನ ಉದಗಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ಹಣ ಈಗ ಖಾಸಗಿ ಜಮೀನಿನ ಪಾಲಾಗುತ್ತಿರುವುದು ಸಾರ್ವಜನಿಕರ...
ಉದ್ಯೋಗ

ಅಗ್ನಿಶಾಮಕ ಇಲಾಖೆಯಲ್ಲಿ ಬೃಹತ್ ನೇಮಕಾತಿ: 1,828 ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ 

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ (KSFES) ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1,828 ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ​ಈ...
ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಬಸವ ಜಯಂತಿ ಸಂಭ್ರಮ: ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಳ್ಳಿ ರಥದ ಭವ್ಯ ಮೆರವಣಿಗೆ 

ಬೆಂಗಳೂರು: “ಕಾಯಕವೇ ಕೈಲಾಸ” ಎಂಬ ಮಂತ್ರದೊಂದಿಗೆ 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ನಡೆಸಿದ ಜಗಜ್ಯೋತಿ ಬಸವಣ್ಣನವರ ಜಯಂತಿಯ ಅಂಗವಾಗಿ, ಏಪ್ರಿಲ್ 20ರ ಸೋಮವಾರದಂದು ರಾಜಧಾನಿಯಲ್ಲಿ ವೈಭವದ ಮೆರವಣಿಗೆಯನ್ನು ಆಯೋಜಿಸಲಾಗಿದೆ. ​ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಶ್ರೀ ವಾಟಾಳ್ ನಾಗರಾಜ್ ಅವರ...
ಜಿಲ್ಲಾ ಸುದ್ದಿಗಳು

ಹುಟ್ಟುಹಬ್ಬದ ಸಂಭ್ರಮದಲ್ಲಿ ಘೋರ ದುರಂತ: ಚಿಕನ್ ಮೂಳೆ ಗಂಟಲಲ್ಲಿ ಸಿಲುಕಿ ಯುವಕ ಸಾವು! 

ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯ ಔತಣಕೂಟವೊಂದು ಯುವಕನೊಬ್ಬನ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿದ ಘಟನೆ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಊಟ ಮಾಡುವಾಗ ಆಕಸ್ಮಿಕವಾಗಿ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಉಸಿರುಗಟ್ಟಿದ ಪರಿಣಾಮ 21 ವರ್ಷದ ಯುವಕ ಮೃತಪಟ್ಟಿದ್ದಾನೆ. ಮೃತ ದುರ್ದೈವಿಯನ್ನು ಸಚಿನ್...
ಕ್ರೈಂ ಸುದ್ದಿಗಳು

ತುಮಕೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ; ಆರು ಮಂದಿ ಕಿಲಾಡಿಗಳ ಬಂಧನ 

ತುಮಕೂರು: ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಅಂತರ ಜಿಲ್ಲಾ ತಂಡವನ್ನು ತಿಲಕ್ ಪಾರ್ಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಬಂಧಿತರನ್ನು ಬೆಂಗಳೂರಿನ ಉಮರ್ (32), ನಜೀರ್ (35), ನವೀದ್ (32) ಮತ್ತು...