ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಪೆರೇಸಂದ್ರ ಪೊಲೀಸರ ಕಠಿಣ ಕಾರ್ಯಾಚರಣೆ: ‘ಡ್ರಂಕ್ ಅಂಡ್ ಡ್ರೈವ್’ ತಪಾಸಣೆ ಜೊತೆ ಜಾಗೃತಿ ಮೂಡಿಸಿದ ಸಿಬ್ಬಂದಿ
ಪೆರೇಸಂದ್ರ: ಸಾರ್ವಜನಿಕರ ಸುರಕ್ಷತೆ ಕಾಪಾಡುವ ಮತ್ತು ಮಾರಕ ರಸ್ತೆ ಅಪಘಾತಗಳನ್ನು ತಡೆಯುವ ಪ್ರಮುಖ ಉದ್ದೇಶದಿಂದ ಪೆರೇಸಂದ್ರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಪೊಲೀಸರು, ಹಲವು ‘ಡ್ರಂಕ್ ಅಂಡ್...
ದೇವಸ್ಥಾನಗಳನ್ನೇ ಟಾರ್ಗೆಟ್ ಮಾಡಿ ವಿಗ್ರಹ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳರ ಸೆರೆ; ಇಬ್ಬರ ಬಂಧನ, ವಿವಿಧ ದೇವಸ್ಥಾನಗಳ ಪವಿತ್ರ ವಿಗ್ರಹಗಳು ವಶ!
ಬೆಂಗಳೂರು: ದೇವಸ್ಥಾನಗಳನ್ನೇ ಪ್ರಮುಖ ಗುರಿಯಾಗಿಸಿಕೊಂಡು ಗರ್ಭಗುಡಿಯಲ್ಲಿದ್ದ ಬೆಲೆಬಾಳುವ ದೇವತಾ ವಿಗ್ರಹಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಖದೀಮರನ್ನು ತಲಘಟ್ಟಪುರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬನ್ನೇರುಘಟ್ಟ ಹಾಗೂ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಳ್ಳತನಗಳು ನಡೆದಿದ್ದು, ಪೊಲೀಸರು ಇಬ್ಬರೂ ಆರೋಪಿಗಳನ್ನು ವಶಕ್ಕೆ...
ಕಳ್ಳತನ ಪ್ರಕರಣ ಭೇದಿಸಿದ ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು: ಮೂವರು ಆರೋಪಿಗಳ ಬಂಧನ, 3 ಲಕ್ಷ ರೂ. ಮೌಲ್ಯದ ಮೊಬೈಲ್ ವಶ!
ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಕನಕಪುರ ವೃತ್ತದ ಪೊಲೀಸರು, ಮೂವರು ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಪೊಲೀಸರು ಅಂದಾಜು 3 ಲಕ್ಷ ರೂಪಾಯಿ ಮೌಲ್ಯದ 10 ಸ್ಮಾರ್ಟ್ ಫೋನ್ಗಳು...
ವಿದ್ಯಾಪೀಠ ಸರ್ಕಲ್ ಬಳಿ ಬಾರ್ ಮುಂಭಾಗ ವ್ಯಕ್ತಿಯ ಬರ್ಬರ ಕೊಲೆ; ಕೋಳಿ ಮಂಜ ಹತ್ಯೆ!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಮತ್ತೆ ನೆತ್ತರು ಹರಿಸಿದ್ದು, ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿದ್ಯಾಪೀಠ ಸರ್ಕಲ್ ಬಳಿ ನಡೆದಿದೆ. ನಿನ್ನೆ ರಾತ್ರಿ ವಿದ್ಯಾಪೀಠ ಸರ್ಕಲ್ ಬಳಿಯ ಬಾರ್ವೊಂದರ ಬಳಿ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ ಈ...
ಮಂಚನಹಳ್ಳಿ ಕೆರೆಯಲ್ಲಿ ತೇಲುತ್ತಿದ್ದ ಶವ: ಅಗ್ನಿಶಾಮಕ ಸಿಬ್ಬಂದಿಯಿಂದ ಮೃತದೇಹ ಹೊರತೆಗೆತ, ತನಿಖೆ ಮುಂದುವರಿಸಿದ ಪೊಲೀಸರು
ಆನೇಕಲ್: ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಮಂಚನಹಳ್ಳಿ ಕೆರೆಯಲ್ಲಿ ಅಂದಾಜು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಂಚನಹಳ್ಳಿ ಕೆರೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ನೀರಿನಲ್ಲಿ ತೇಲುತ್ತಿರುವುದನ್ನು...
ದೊಮ್ಮಸಂದ್ರ-ಕೊಮ್ಮಸಂದ್ರ ರಸ್ತೆ ಸಂಪೂರ್ಣ ಅಧ್ವಾನ: ವಾಹನ ಸವಾರರಿಗೆ ನಿತ್ಯ ನರಕ ದರ್ಶನ
ಆನೇಕಲ್: ತಾಲ್ಲೂಕಿನ ದೊಮ್ಮಸಂದ್ರ ಸಮೀಪದ ಕೊಮ್ಮಸಂದ್ರ ಮುಖ್ಯ ರಸ್ತೆಯು ನಿರಂತರ ಮಳೆಯಿಂದಾಗಿ ಸಂಪೂರ್ಣ ಕೆಸರು ಗದ್ದೆಯಂತಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಓಡಾಡಲು ಸಾಧ್ಯವಾಗದಷ್ಟು ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ದೊಮ್ಮಸಂದ್ರ-ಕೊಮ್ಮಸಂದ್ರ-ಬಯಲು ಬಸವೇಶ್ವರ ದೇವಾಲಯ ರಸ್ತೆಯು...
ಮಳೆ ಕೊರತೆ ಹಾಗೂ ಟೊಮೆಟೊ ದರ ಕುಸಿತದಿಂದ ಕಂಗಾಲಾದ ರೈತ; ಸಾಲದ ಸುಳಿಯಲ್ಲಿ ಸಿಲುಕಿದ ಅನ್ನದಾತ!
ದೊಡ್ಡಬಳ್ಳಾಪುರ: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ಟೊಮೆಟೊ ದರ ತೀವ್ರವಾಗಿ ಕುಸಿದಿರುವುದು ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರನ್ನು ಕಂಗಾಲಾಗಿಸಿದೆ. ಸಾಲ ಮಾಡಿ ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಬೆಳೆದ ಫಸಲಿಗೆ ತಕ್ಕ ಬೆಲೆ ಸಿಗದೆ, ಅನ್ನದಾತರು...
ಸಿನಿಮಾ ನೋಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳ್ಳತನ: ಮಂಚದ ಕೆಳಗೆ ಸಿಕ್ಕಿಬಿದ್ದ ಓಲಾ ಕ್ಯಾಬ್ ಚಾಲಕ!
ಮನೆಯವರೆಲ್ಲರೂ ಸಿನಿಮಾ ನೋಡಲು ತೆರಳಿದ್ದ ಸಮಯವನ್ನು ಕಾದು ಮನೆಗೆ ನುಗ್ಗಿ ಬರೋಬ್ಬರಿ 130 ಗ್ರಾಂ ಚಿನ್ನ ಕಳವು ಮಾಡಿದ್ದ ಆರೋಪಿಯೊಬ್ಬ, ಮನೆ ಮಾಲೀಕನ ಸಮಯಪ್ರಜ್ಞೆ ಹಾಗೂ ಜಾಣ್ಮೆಯಿಂದಾಗಿ ಕೈಕಾಲು ಕಟ್ಟಿಹಾಕಿದಂತೆ ಸಿಕ್ಕಿಬಿದ್ದ ರೋಚಕ ಘಟನೆ ದೇವನಹಳ್ಳಿ ತಾಲ್ಲೂಕಿನ ಗೊಬ್ಬರಗುಂಟೆ ಗ್ರಾಮದಲ್ಲಿ ನಡೆದಿದೆ....
ಜಿಗಣಿ ಪೊಲೀಸರಿಂದ ಬಿಗ್ ಆಪರೇಷನ್: 29 ದ್ವಿಚಕ್ರ ವಾಹನಗಳ ಜತೆಗೆ ಕಳ್ಳರ ಬಂಧನ
ಆನೇಕಲ್: ತಾಲ್ಲೂಕಿನ ಜಿಗಣಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನು ಸರಣಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರ್ಜ್ಯ ಕಳ್ಳರ ಜಾಲವನ್ನು ಭೇದಿಸುವಲ್ಲಿ ಜಿಗಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳಿಂದ ಬರೋಬ್ಬರಿ ₹18,00,000/- ಮೌಲ್ಯದ ಒಟ್ಟು 29 ದ್ವಿಚಕ್ರ ವಾಹನಗಳನ್ನು...
ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರಿಂದ ಪೊಲೀಸ್ ಸಿಬ್ಬಂದಿಗೆ ಗೌರವ
ಕಲಬುರಗಿ: ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಮುಖ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳನ್ನು ಶೀಘ್ರ ಹಾಗೂ ಸಮರ್ಥವಾಗಿ ವಿಲೇವಾರಿಗೊಳಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕಲಬುರಗಿ ನಗರದ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರು ಪ್ರಶಂಸಿಸಿ,...
