Share News

ಬೆಳಗಾವಿ: ಸಮಾಜದ ಶಾಂತಿ ಮತ್ತು ಸ್ವಾಸ್ಥ್ಯಕ್ಕೆ ಧಕ್ಕೆ ತರುತ್ತಿದ್ದ ಆರೋಪಿಗಳ ವಿರುದ್ಧ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ (ಎಸ್ಪಿ ರಾಮರಾಜ ಆದೇಶದಂತೆ) ಕಠಿಣ ಕ್ರಮ ಕೈಗೊಂಡಿದ್ದು, ಕಾಗವಾಡ ವ್ಯಾಪ್ತಿಯ ಇಬ್ಬರು ರೌಡಿ ಶೀಟರ್‌ಗಳನ್ನು ಜಿಲ್ಲೆಯಿಂದ ಹೊರಕ್ಕೆ ಗಡಿಪಾರು ಮಾಡಿದ್ದಾರೆ.

ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓಸಿ, ಮಟಕಾ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಮನೋಜ ಕಾಂಬಳೆ ಮತ್ತು ಶಬ್ಬಿರ ಪಠಾಣ ಎಂಬುವವರನ್ನು ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದಂತೆ ಬುಧವಾರದಂದು ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿಗಳನ್ನು ಈ ಕೆಳಗಿನಂತೆ ಸ್ಥಳಾಂತರಿಸಲಾಗಿದೆ:

​ಮನೋಜ ಕಾಂಬಳೆ: ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ.

​ಶಬ್ಬಿರ ಪಠಾಣ: ವಿಜಯಪುರ ಜಿಲ್ಲೆಯ ಗಾಂಧಿ ಚೌಕ ಪೊಲೀಸ್ ಠಾಣಾ ವ್ಯಾಪ್ತಿಗೆ.

ಸಾರ್ವಜನಿಕ ಶಾಂತಿಗೆ ಭಂಗ ತರುವ ಮತ್ತು ಅಕ್ರಮ ದಂಧೆಗಳಲ್ಲಿ ತೊಡಗುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಗಡಿಪಾರಾದ ಇಬ್ಬರು ವ್ಯಕ್ತಿಗಳು ನಿಗದಿತ ಅವಧಿಯವರೆಗೆ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

​ಕಾಗವಾಡ ಪೊಲೀಸರು ಈ ಗಡಿಪಾರು ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿದ್ದು, ಈ ಕ್ರಮವು ಅಕ್ರಮ ದಂಧೆಕೋರರಲ್ಲಿ ನಡುಕ ಹುಟ್ಟಿಸಿದೆ.

 


Share News