Share News

ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸಿಪಿಐ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಇಲ್ಲಿನ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ.

​SDRF ಪಡೆಯ ಸಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಶೈಲ ಚೌಗಲೆ (37) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಅಧಿಕಾರಿಯಾಗಿದ್ದಾರೆ.

ಗುರುವಾರ ಶ್ರೀಶೈಲ ಚೌಗಲೆ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದರು. ಇದರಿಂದ ಅನುಮಾನಗೊಂಡ ಅವರ ಪತ್ನಿ, ತಕ್ಷಣವೇ SDRF ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು, ಶ್ರೀಶೈಲ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅವರು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

​ಈ ಘಟನೆಗೆ ಸಂಬಂಧಿಸಿದಂತೆ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಯ ಆತ್ಮಹತ್ಯೆಗೆ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ಹೊರಬರಬೇಕಿದೆ.

 


Share News