ಬೆಂಗಳೂರು: ರೈಲು ಮಾರ್ಗದ ಮೂಲಕ ಅಸ್ಸಾಂನಿಂದ ಬೆಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
ಅಸ್ಸಾಂ ಮೂಲದ ಹೀರಾಲಾಲ್ ಕಾನು ಬಂಧಿತ ಆರೋಪಿ. ನಗರದ ಓಕಳಿಪುರಂ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಆಧರಿಸಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಆರೋಪಿಯಿಂದ ₹5.31 ಲಕ್ಷ ಮೌಲ್ಯದ 6.255 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಡಿವೈಎಸ್ಪಿ ಅಬೂಬಕ್ಕರ್ ಮುಜಾವರ್ ಅವರ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಜಾಲದ ಹಿನ್ನೆಲೆ ಹಾಗೂ ಸಾಗಾಟದ ಮೂಲದ ಕುರಿತು ತನಿಖೆ ಮುಂದುವರಿದಿದೆ.

Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA