Share News

 

ಬೆಂಗಳೂರು ನಗರದ ಈಶಾನ್ಯ ವಿಭಾಗದ ಪೊಲೀಸರು ಏಪ್ರಿಲ್ 2026ರ ಮಾಹೆಯಲ್ಲಿ ಸಿ.ಇ.ಐ.ಆರ್ (CEIR) ಪೋರ್ಟಲ್ ಬಳಸಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 11 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳುವಾಗಿದ್ದ ಮತ್ತು ಸಾರ್ವಜನಿಕರು ಕಳೆದುಕೊಂಡಿದ್ದ ಸುಮಾರು 1.75 ಕೋಟಿ ಬೆಲೆಯ 692 ಮೊಬೈಲ್ ಫೋನ್‌ಗಳನ್ನು ಯಶಸ್ವಿಯಾಗಿ ವಶಪಡಿಸಿಕೊಳ್ಳಲಾಗಿದೆ.

ಉಪ ಪೊಲೀಸ್ ಆಯುಕ್ತರಾದ ಶ್ರೀ. ಮಿಥುನ್ ಕುಮಾರ್ ಜಿ ಕೆ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಕಳೆದುಕೊಂಡ ತಕ್ಷಣ ಸಿ.ಇ.ಐ.ಆರ್ ಪೋರ್ಟಲ್‌ನಲ್ಲಿ ವಿವರ ದಾಖಲಿಸುವುದು ಅಥವಾ ಪೊಲೀಸ್ ಠಾಣೆಗೆ ದೂರು ನೀಡುವುದು ಅವಶ್ಯಕ ಎಂದು ಇಲಾಖೆ ತಿಳಿಸಿದೆ.

ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್


Share News