Share News

ಬೆಂಗಳೂರಿನ ಸಿಸಿಬಿ ಮಾದಕ ವಸ್ತು ನಿಗ್ರಹ ದಳ ಮತ್ತು ಜೀವನಭೀಮಾನಗರ ಪೊಲೀಸರು ಜಂಟಿಯಾಗಿ ಭರ್ಜರಿ ಕಾರ್ಯಾಚರಣೆ ನಡೆಸಿ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಒಟ್ಟು 3 ಕೆಜಿ 312 ಗ್ರಾಂ ಹೈಡೋ ಗಾಂಜಾ, 27 ಗ್ರಾಂ ಎಂಡಿಎಂಎ, 1 ಕೆಜಿ 272 ಗ್ರಾಂ ಸಾಮಾನ್ಯ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಒಟ್ಟು ಸೊತ್ತಿನ ಸರ್ಕಾರಿ ಮೌಲ್ಯ 1.20 ಕೋಟಿ ಆಗಿದ್ದು, ಇದರ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 2.40 ಕೋಟಿ ರೂಪಾಯಿಗಳಾಗಿವೆ. ವಿದೇಶದಿಂದ ಪಾರ್ಸೆಲ್ ಮೂಲಕ ಬಂದಿದ್ದ ಹೈಡೋ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳ ಮಾಹಿತಿಯ ಮೇರೆಗೆ ಅಂಚೆ ಕಚೇರಿಯ ಮೇಲೆ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯು ಅಪರಾಧ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ. ಅಜಯ್ ಹಿಲೋರಿ ರವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆದಿದೆ. ಅವರೊಂದಿಗೆ ಅಪರಾಧ-02 ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ರಾಜಾ ಇಮಾಮ್ ಖಾಸೀಂ ಮತ್ತು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಾ. ವಿಕ್ರಮ್ ಅಮಟೆ ರವರು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ಈ ಹಿರಿಯ ಅಧಿಕಾರಿಗಳ ಉಸ್ತುವಾರಿಯಲ್ಲಿ, ಸಿಸಿಬಿ ಮತ್ತು ಹಲಸೂರು ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರುಗಳು, ಸಿಸಿಬಿಯ ಮಾದಕ ವಸ್ತು ನಿಗ್ರಹ ದಳ ಹಾಗೂ ಜೀವನಭೀಮಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು ಇತರೆ ಸಿಬ್ಬಂದಿಗಳನ್ನೊಳಗೊಂಡ ತಂಡವು ಅತ್ಯಂತ ಚಾಣಾಕ್ಷತನದಿಂದ ಈ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್

 


Share News