Share News

ಹೊಸಕೋಟೆ/ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾನ್ಯ ಪೊಲೀಸ್ ಅಧೀಕ್ಷಕರಾದ (ಎಸ್ಪಿ) ಸಿ.ಎಚ್. ಚಂದ್ರಕಾಂತ್ ಅವರು ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ನಡೆಸಿದರು.

​ಠಾಣೆಗೆ ಆಗಮಿಸಿದ ಎಸ್ಪಿಯವರು, ಠಾಣೆಯ ದೈನಂದಿನ ಕಾರ್ಯವೈಖರಿ, ವಿವಿಧ ಅಪರಾಧ ಪ್ರಕರಣಗಳ ತನಿಖೆಯ ಪ್ರಗತಿ, ರಿಜಿಸ್ಟರ್‌ಗಳು ಹಾಗೂ ಪ್ರಮುಖ ಕಡತಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು. ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಮತ್ತು ಸಾಕ್ಷ್ಯಾಧಾರಗಳನ್ನು ಸಮರ್ಪಕವಾಗಿ ಸಂಗ್ರಹಿಸಿ ನ್ಯಾಯಾಲಯಕ್ಕೆ ಸಲ್ಲಿಸಲು ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

​ಕಾನೂನು ಸುವ್ಯವಸ್ಥೆ ಮತ್ತು ಸಿಬ್ಬಂದಿ ಕುಂದುಕೊರತೆ ಸಭೆ:

ಠಾಣಾ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಗಟ್ಟಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಿಬ್ಬಂದಿಗೆ ಸೂಚಿಸಿದರು. ಇದೇ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕುಂದುಕೊರತೆಗಳನ್ನು ಆಲಿಸಿದ ಅವರು, ಠಾಣೆಯ ಕಾರ್ಯಕ್ಷಮತೆ ಹೆಚ್ಚಿಸಲು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.

​ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಿ, ಸ್ನೇಹಪರ ಮತ್ತು ಪಾರದರ್ಶಕ ಪೊಲೀಸ್ ಸೇವೆ ಒದಗಿಸುವ ಮೂಲಕ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಬೇಕೆಂದು ಸಿಬ್ಬಂದಿಗೆ ಕರೆ ನೀಡಿದರು. ಪರಿಶೀಲನೆ ವೇಳೆ ಠಾಣೆಯ ಇನ್‌ಸ್ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ :- ಶಶಿ ಕುಮಾರ್ 


Share News