Share News

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಸುಗಮ ಸಂಚಾರಕ್ಕೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನಗರದ ಮುಖ್ಯ ರಸ್ತೆ ಹಾಗೂ ಉಪ ಮುಖ್ಯ ರಸ್ತೆಗಳ ಪಾದಚಾರಿ ಮಾರ್ಗಗಳಲ್ಲಿ ಇನ್ನು ಮುಂದೆ ಬೀದಿಬದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಾಲಿಕೆಗಳ ಬಜೆಟ್ ಪೂರ್ವಭಾವಿ ಸಿದ್ಧತೆ ಹಾಗೂ ಜಿಬಿಎ ಕಾರ್ಯಕಾರಿ ಸಭೆಯ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಹೊಸ ಪಾದಚಾರಿ ನೀತಿ: ನಾಗರಿಕರು ಪಾದಚಾರಿ ಮಾರ್ಗಗಳಲ್ಲಿ ಓಡಾಡಲು ಪಡುತ್ತಿರುವ ಕಷ್ಟವನ್ನು ಗಮನಿಸಿ, ಹೊಸ ಪಾದಚಾರಿ ನೀತಿಯನ್ನು ರೂಪಿಸಲು ತೀರ್ಮಾನಿಸಲಾಗಿದೆ.

ಪ್ರತ್ಯೇಕ ವ್ಯಾಪಾರ ವಲಯ: ಬೀದಿಬದಿ ವ್ಯಾಪಾರಿಗಳಿಂದ ಪಾದಚಾರಿ ಮಾರ್ಗ ಒತ್ತುವರಿಯಾಗುತ್ತಿರುವುದನ್ನು ತಡೆಯಲು, ಅವರಿಗೆ ವ್ಯಾಪಾರಕ್ಕಾಗಿ ಪ್ರತ್ಯೇಕ ಜಾಗ ಅಥವಾ ನಿರ್ದಿಷ್ಟ ರಸ್ತೆಗಳನ್ನು ಗುರುತಿಸಲಾಗುವುದು. ಇದಕ್ಕೆ ಎಲ್ಲಾ ಶಾಸಕರು ಒಮ್ಮತದ ಸಮ್ಮತಿ ಸೂಚಿಸಿದ್ದಾರೆ.

ಗುರುತಿನ ಚೀಟಿ ಕಡ್ಡಾಯ: ನಗರದಲ್ಲಿ ಈಗಾಗಲೇ 60 ಸಾವಿರ ಬೀದಿಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಅಧಿಕೃತ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು. ಗುರುತಿನ ಚೀಟಿ ಇಲ್ಲದವರಿಗೆ ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶವಿರುವುದಿಲ್ಲ.


Share News