ಬೆಂಗಳೂರು: ತನಿಖೆಯ ಸೂಕ್ಷ್ಮತೆಗಳು ಹಾಗೂ ಕಾನೂನುಬದ್ಧ ವಿಚಾರಣಾ ಪ್ರಕ್ರಿಯೆಗಳ ಕುರಿತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ದಿನಾಂಕ 04-09-2026 ರಂದು “Custodial Interrogation & Salient Features of Investigation” ವಿಷಯದ ಮೇರೆಗೆ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಕರ್ನಾಟಕ ಹೈಕೋರ್ಟ್‌ನ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಎಂ. ವಿ. ಶ್ರೀಶಾನಂದ ಅವರ ಘನ ಉಪಸ್ಥಿತಿಯಲ್ಲಿ ಹಾಗೂ ಬೆಂಗಳೂರು ನಗರ ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತರಾದ ಶ್ರೀ ಸಿ. ವಂಶಿ ಕೃಷ್ಣ (ಐಪಿಎಸ್) ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನ್ಯಾಯಮೂರ್ತಿಗಳು, ವಿಚಾರಣಾ ಸಮಯದಲ್ಲಿ ಅನುಸರಿಸಬೇಕಾದ ಕಾನೂನು ಕ್ರಮಗಳು ಹಾಗೂ ತನಿಖಾ ಹಂತದಲ್ಲಿ ವಹಿಸಬೇಕಾದ ಜಾಗರೂಕತೆಯ ಕುರಿತು ಪ್ರಮುಖ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು ನೀಡಿದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನಗಳು ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ವೃತ್ತಿಪರ ಕರ್ತವ್ಯ ನಿರ್ವಹಣೆಯಲ್ಲಿ ಅತ್ಯಂತ ಉಪಯುಕ್ತವಾಗಿ ಮೂಡಿಬಂದವು.
ಕಾರ್ಯಾಗಾರವನ್ನು ಯಶಸ್ವಿಯಾಗಿ ಸಂಘಟಿಸಿದ ವಿ.ವಿ. ಪುರಂ ಕಾನೂನು ಕಾಲೇಜಿನ ಆಡಳಿತ ಮಂಡಳಿಗೆ ಹಾಗೂ ಸಹಕರಿಸಿದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳನ್ನು ಅರ್ಪಿಸಲಾಯಿತು.

