ಎದೆನೋವು ತಾಳಲಾರದೆ ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು!
ಧಾರವಾಡ: ತೀವ್ರ ಎದೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಗರದ ಕುಮಾರೇಶ್ವರ ನಗರದಲ್ಲಿ ನಡೆದಿದೆ. ವಿಠಲ್ ಜೋನಿ (ಮೃತಪಟ್ಟವರು) ನೇಣಿಗೆ ಶರಣಾದ ದುರ್ದೈವಿ. ಇವರು ಈ ಹಿಂದೆ ಅರಣ್ಯ ಇಲಾಖೆಯ...
ಮೈಸೂರು ಸಮೀಪ ಆನೆ ದಂತ ಮಾರಾಟ ಜಾಲ ಭೇದಿಸಿದ ಅರಣ್ಯ ಸಂಚಾರಿ ದಳ: ಇಬ್ಬರ ಬಂಧನ, ದಂತ ಹಾಗೂ ಬೈಕ್ ಜಪ್ತಿ!
ಮೈಸೂರು: ಅಕ್ರಮವಾಗಿ ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲವೊಂದನ್ನು ಮೈಸೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ. ಮೈಸೂರು ಸಮೀಪದ ಚಿಕ್ಕಹಳ್ಳಿ ಗ್ರಾಮದ ವ್ಯಾಪ್ತಿಯ ಶ್ರೀ ರಾಮ ಬಡಾವಣೆಯ ಮೊಸಂಬಾಯನಹಳ್ಳಿ ರಸ್ತೆಯಲ್ಲಿ ಈ ಯಶಸ್ವಿ ದಾಳಿ ನಡೆದಿದೆ....
ಅಡಕೆ ತೋಟದಲ್ಲಿ ಮಾಂಸ ಸಂಗ್ರಹಿಸುತ್ತಿದ್ದಾಗ ದಾಳಿ: ಕಡವೆ ಬೇಟೆ ಪ್ರಕರಣದಲ್ಲಿ ಓರ್ವ ಆರೋಪಿ ಬಂಧನ, ಐವರು ತಲೆಮರೆಸಿಕೊಳ್ಳುವಲ್ಲಿ ಯಶಸ್ವಿ
ಅಂಕೋಲಾ: ತಾಲೂಕಿನ ರಾಮನಗುಳಿ ಅರಣ್ಯ ವಲಯ ವ್ಯಾಪ್ತಿಯ ಕಲ್ಲೇಶ್ವರ ಗ್ರಾಮದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಅಡಕೆ ತೋಟದಲ್ಲಿ ಮಾಂಸವನ್ನು ಚೀಲಗಳಲ್ಲಿ ತುಂಬುತ್ತಿದ್ದ ವೇಳೆ ಅರಣ್ಯ ಸಂಚಾರಿ ದಳದವರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಳಿದ ಐವರು ಆರೋಪಿಗಳು...
ನಾಲೆಯಲ್ಲಿ ಈಜಲು ತೆರಳಿದ್ದ ಬಾಲಕನ ಮೇಲೆ ಮೊಸಳೆ ಭೀಕರ ದಾಳಿ — ಸ್ನೇಹಿತರ ಸಮಯಪ್ರಜ್ಞೆಯಿಂದ ಪವಾಡಸದೃಶ ರಕ್ಷಣೆ
ಮಂಡ್ಯ: ನಾಲೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬನ ಮೇಲೆ ಮೊಸಳೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿಯ ವಿರಿಜಾ ನಾಲೆಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ವಿಶಾಲ್ ರಾವತ್ (13) ಮೊಸಳೆ ದಾಳಿಗೊಳಗಾದ ಬಾಲಕ. ಈತನ ಕುಟುಂಬ ಕಬ್ಬು...
ಕಾಡುಹಂದಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 7 ಕೆ.ಜಿ. ಮಾಂಸ ಹಾಗೂ ಸ್ಕೂಟರ್ ವಶ!
ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಕಾಡುಹಂದಿಯನ್ನು ಅಕ್ರಮವಾಗಿ ಬೇಟೆಯಾಡಿ ಕೊಂದು, ಅದರ ಮಾಂಸವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿ ವ್ಯಾಪ್ತಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ –...
ಉಡ ಬೇಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅರಣ್ಯ ಇಲಾಖೆ ಕಾರ್ಯಾಚರಣೆ, ತಂದೆ-ಮಗ ಬಂಧನ
ಉತ್ತರಕನ್ನಡ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಗ್ರಾಮದಲ್ಲಿ ನಡೆದ ಉಡ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ದಿಢೀರ್ ಕಾರ್ಯಾಚರಣೆ ನಡೆಸಿ ತಂದೆ ಹಾಗೂ ಮಗನನ್ನು ಬಂಧಿಸಿದ್ದಾರೆ. ಬಂಧಿತರನ್ನು ಇನಾಸ್ ಬಸ್ಥ್ಯಾಂವ್ ಸಿದ್ದಿ ಮತ್ತು ಪ್ರಕಾಶ್ ಇನಾಸ್ ಸಿದ್ದಿ ಎಂದು...
ಬಡಗಲಪುರದಲ್ಲಿ ರೈತನ ಕೊಂದು ತಿಂದಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಚಾಮರಾಜನಗರ: ರೈತನ ಮೇಲೆ ದಾಳಿ ನಡೆಸಿ ಕೊಂದು ತಿಂದಿದ್ದ ಭೀಕರ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆಹಿಡಿದಿದ್ದಾರೆ. ಇದರಿಂದ ಕಳೆದ ಹಲವು ದಿನಗಳಿಂದ ಭಯದ ವಾತಾವರಣದಲ್ಲಿದ್ದ ಚಾಮರಾಜನಗರ ತಾಲೂಕಿನ ಹಲವು ಗ್ರಾಮಗಳ ರೈತರು ಹಾಗೂ ಸಾರ್ವಜನಿಕರು...
ಮಲೆ ಮಹದೇಶ್ವರ ವನ್ಯಜೀವಿಧಾಮ: ಜಿಂಕೆ ಬೇಟೆಯಾಡುತ್ತಿದ್ದ ವ್ಯಕ್ತಿ ಬಂಧನ — ಐವರು ಪರಾರಿ!
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದ ಗೋಪಿನಾಥಂ ವಲಯದಲ್ಲಿ ಜಿಂಕೆ ಬೇಟೆಯಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋಪಿನಾಥಂ ಗ್ರಾಮದ ನಿವಾಸಿ ಮಣಿ ಬಂಧಿತ ಆರೋಪಿ. ದಾಳಿ ವೇಳೆ ಕಾರ್ಯಾಚರಣೆಯ ಸುಳಿವು ಅರಿತ...
ತಾಯಿಯಿಂದ ಬೇರ್ಪಟ್ಟ ಒಂದು ತಿಂಗಳ ಆನೆಮರಿ ಮೈಸೂರು ಮೃಗಾಲಯಕ್ಕೆ ರವಾನೆ!
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿಯಿಂದ ಬೇರ್ಪಟ್ಟು ಅಲೆದಾಡುತ್ತಿದ್ದ ಸುಮಾರು ಒಂದು ತಿಂಗಳ ಆನೆಮರಿಯನ್ನು ಸುರಕ್ಷತೆ ಹಾಗೂ ಹೆಚ್ಚಿನ ಆರೈಕೆಯ ದೃಷ್ಟಿಯಿಂದ ಮೈಸೂರು ಮೃಗಾಲಯಕ್ಕೆ ಸಾಫ್ಟ್ ಆಗಿ ರವಾನಿಸಲಾಗಿದೆ. ಅಜ್ಜಿಪುರ ಸಮೀಪದ ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯ ಮುಖ್ಯ ರಸ್ತೆಯಲ್ಲಿ ಭಾನುವಾರದಿಂದ...
ಹುಣಸೂರು: ಹನಗೋಡು ಭಾಗದಲ್ಲಿ ಹುಲಿ ಹಾವಳಿ; ಶೀಘ್ರ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಸೂಚನೆ!
ಹುಣಸೂರು: ತಾಲೂಕಿನ ಹನಗೋಡು ಭಾಗದಲ್ಲಿ ದಿನೇ ದಿನೇ ಹುಲಿ ಹಾವಳಿ ಹೆಚ್ಚಾಗಿದ್ದು, ಆತಂಕಗೊಂಡಿರುವ ಗ್ರಾಮಸ್ಥರ ರಕ್ಷಣೆಗೆ ಧಾವಿಸಿರುವ ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್, ಕೂಡಲೇ ಕಾರ್ಯಾಚರಣೆ ತೀವ್ರಗೊಳಿಸಿ ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸ್ಥಳೀಯರ ಆಕ್ರೋಶ –...
