ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಸಹೋದರರು ಜಲಸಮಾಧಿ: ತಂದೆಯ ಕಣ್ಣೆದುರೇ ನಡೆದ ಘೋರ ದುರಂತ!
ದಾವಣಗೆರೆ/ಹರಪನಹಳ್ಳಿ: ಈಜಲು ಹೋದ ಇಬ್ಬರು ಸೋದರರು ನದಿಯ ಪಾಲಾದ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ಇಂದು ನಡೆದಿದೆ. ತಂದೆಯ ಕಣ್ಣೆದುರೇ ಇಬ್ಬರು ಪುತ್ರರು ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಮೃತಪಟ್ಟವರನ್ನು ಮನು...
ನ್ಯಾಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ₹25 ಕೋಟಿ ವಚನೆ: ಖತರ್ನಾಕ್ ದಂಪತಿ ಸಿಸಿಬಿ ವಶಕ್ಕೆ
ಬೆಂಗಳೂರು: ಸರ್ಕಾರಿ ಕೆಲಸದ ಆಮಿಷವೊಡ್ಡಿ ನೂರಾರು ನಿರುದ್ಯೋಗಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ದಂಪತಿಯನ್ನು ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚಿಕ್ಕಮಗಳೂರು ಮೂಲದ ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಕಳೆದ 10 ವರ್ಷಗಳಿಂದ ಬೆಂಗಳೂರಿನ ಬಸವೇಶ್ವರ ನಗರದಲ್ಲಿ...
ಬಡವರ ಪಾಲಿನ ‘ಪಾರ್ಲೆ-ಜಿ’ಗೆ ಕಂಟಕ: ರಾಜ್ಯದ 4 ಉತ್ಪಾದನಾ ಘಟಕಗಳು ಬಂದ್!
ಹುಬ್ಬಳ್ಳಿ: ದಶಕಗಳಿಂದ ಬಡಮಕ್ಕಳು ಹಾಗೂ ರೋಗಿಗಳ ಹಸಿವು ನೀಗಿಸುತ್ತಿದ್ದ ಅಚ್ಚುಮೆಚ್ಚಿನ ‘ಪಾರ್ಲೆ-ಜಿ’ ಬಿಸ್ಕೆಟ್ ಉತ್ಪಾದನೆಗೆ ಈಗ ದೊಡ್ಡ ವಿಘ್ನ ಎದುರಾಗಿದೆ. ಇರಾನ್-ಇಸ್ರೇಲ್ ನಡುವಿನ ಯುದ್ಧದ ಜಾಗತಿಕ ಪರಿಣಾಮವಾಗಿ ರಾಜ್ಯದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಕಳೆದ ಆರು ದಿನಗಳಿಂದ...
ಗ್ಯಾಸ್ ಗ್ರಾಹಕರ ಗಮನಕ್ಕೆ: ಇನ್ಮುಂದೆ 24 ಗಂಟೆ ಬುಕ್ಕಿಂಗ್ ಲಭ್ಯವಿಲ್ಲ; ಜಾರಿಗೆ ಬಂದವು ಹೊಸ ನಿಯಮಗಳು!
ಬೆಂಗಳೂರು: ದೇಶಾದ್ಯಂತ ಅಡುಗೆ ಅನಿಲ (LPG) ಬಳಕೆದಾರರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಗ್ಯಾಸ್ ಕಂಪನಿಗಳು ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ತಂದಿದ್ದು, ಇನ್ಮುಂದೆ ಗ್ರಾಹಕರು ನಿರ್ದಿಷ್ಟ ಸಮಯದ ಮಿತಿಯಲ್ಲೇ ಸಿಲಿಂಡರ್ ಕಾಯ್ದಿರಿಸಬೇಕಾಗುತ್ತದೆ. ಗ್ಯಾಸ್ ವಿತರಣೆಯಲ್ಲಿನ ಪಾರದರ್ಶಕತೆ ಮತ್ತು ದುರುಪಯೋಗ ತಡೆಗಟ್ಟಲು...
ಬೈಲಹೊಂಗಲ: ಕುಡುಕ ಪತಿಯ ಅಟ್ಟಹಾಸಕ್ಕೆ ಪತ್ನಿ ಬಲಿ; ತವರು ಮನೆಗೇ ನುಗ್ಗಿ ಕಲ್ಲಿನಿಂದ ಜಜ್ಜಿ ಭೀಕರ ಕೊಲೆ
ಬೈಲಹೊಂಗಲ: ಕುಡುಕ ಪತಿಯ ದೈಹಿಕ ಹಾಗೂ ಮಾನಸಿಕ ಕಿರುಕುಳ ತಾಳಲಾರದೆ ತವರು ಮನೆ ಸೇರಿದ್ದ ಪತ್ನಿಯನ್ನೇ ಪತಿ ಕ್ರೂರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಆರೋಪಿಯನ್ನು ಪೊಲೀಸರು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಬೆಂಗಳೂರು: ಅಪಘಾತದ ನಂತರವೂ ‘ತಾಳ್ಮೆ’ ಮೆರೆದ ಕಾರು ಚಾಲಕ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್!
ಬೆಂಗಳೂರು: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಸಣ್ಣ ಅಪಘಾತವಾದರೂ ಸಾಕು, ಚಾಲಕರು ರಸ್ತೆಯಲ್ಲೇ ಕಿತ್ತಾಟಕ್ಕೆ ಇಳಿಯುವುದು, ವಾಗ್ವಾದ ನಡೆಸುವುದು ಮಾಮೂಲಿ. ಆದರೆ, ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ ಕಾರು ಚಾಲಕರೊಬ್ಬರು ತೋರಿದ ಸಂಯಮ ಮತ್ತು ಮಾನವೀಯತೆ ಈಗ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಬೆಂಗಳೂರಿನ ರಸ್ತೆಯೊಂದರಲ್ಲಿ...
ನಂಬಿಕೆ ದ್ರೋಹ: ಮಗಳ ವಯಸ್ಸಿನ ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಅಂಬುಲೆನ್ಸ್‌ನಲ್ಲೇ ಹೆರಿಗೆ
ಗುಂಡ್ಲುಪೇಟೆ: ತಾಲೂಕಿನ ದೇಶಿಪುರ ಗ್ರಾಮದಲ್ಲಿ ಮಾನವೀಯತೆ ಮರೆತ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಸಂಬಂಧಿಕನೇ ಆದ 46 ವರ್ಷದ ವ್ಯಕ್ತಿಯೊಬ್ಬ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ, ಬಾಲಕಿ ಅಂಬುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ...
ಬೆಂಗಳೂರು: ಮುಖ್ಯ ರಸ್ತೆಗಳಲ್ಲಿ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್; ಪಾದಚಾರಿ ಮಾರ್ಗಕ್ಕೆ ಹೊಸ ನೀತಿ ಜಾರಿ – ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಸುಗಮ ಸಂಚಾರಕ್ಕೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನಗರದ ಮುಖ್ಯ ರಸ್ತೆ ಹಾಗೂ ಉಪ ಮುಖ್ಯ ರಸ್ತೆಗಳ ಪಾದಚಾರಿ ಮಾರ್ಗಗಳಲ್ಲಿ ಇನ್ನು ಮುಂದೆ ಬೀದಿಬದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ...
ಮೈಸೂರು: ಹಾರ್ಡಿಂಗ್ ವೃತ್ತದ ಬಳಿ ಧರೆಗೆ ಉರುಳಿದ ಬೃಹತ್ ಮರ; ಕಾರು, ಆಟೋ ಜಖಂ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಳೆಯ ಬೃಹತ್ ಮರವೊಂದು ಏಕಾಏಕಿ ರಸ್ತೆಗೆ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಮೈಸೂರಿನ ಪ್ರಮುಖ ಕೇಂದ್ರವಾದ ಹಾರ್ಡಿಂಗ್ ವೃತ್ತದ (Hardinge Circle) ಬಳಿ ಈ ಘಟನೆ ಸಂಭವಿಸಿದೆ. ಶನಿವಾರ ಹಾರ್ಡಿಂಗ್...
ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಭೀಕರ ಕೊಲೆ; ಹಳೇ ದ್ವೇಷಕ್ಕೆ ಯುವಕ ಬಲಿ?
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕ್ರಿಮಿನಲ್‌ಗಳ ಅಟ್ಟಹಾಸ ಮುಂದುವರಿದಿದ್ದು, ಇಂದು ಮುಂಜಾನೆ ರಾಮಮೂರ್ತಿ ನಗರದ ಟಿ.ಸಿ. ಪಾಳ್ಯ ಮುಖ್ಯರಸ್ತೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನ ಶವ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಮೃತನನ್ನು ಕಿರಣ್...