ಬೆಂಗಳೂರು ಗ್ರಾಮಾಂತರ: ಬಾಲ್ಯವಿವಾಹ ತಡೆಗೆ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆ; ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಖಚಿತ!
ಬೆಂಗಳೂರು: ಅಕ್ಷಯ ತೃತೀಯ ಮತ್ತು ಬಸವ ಜಯಂತಿಯಂತಹ ಶುಭ ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಗಳಿದ್ದು, ಇದನ್ನು ತಡೆಗಟ್ಟಲು ಸಾರ್ವಜನಿಕರು ಹಾಗೂ ಅಧಿಕಾರಿಗಳು ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಕಟ್ಟುನಿಟ್ಟಿನ ಆದೇಶ...
ಮೈಸೂರು: ಮುಡಾದಿಂದ ಬೃಹತ್ ಕಾರ್ಯಾಚರಣೆ; ದೇವನೂರು ಗ್ರಾಮದಲ್ಲಿ ಅನಧಿಕೃತ ಒತ್ತುವರಿ ತೆರವು
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ನಗರದ ಹೊರವಲಯದಲ್ಲಿ ಭೂಗಳ್ಳರ ವಿರುದ್ಧ ಸಮರ ಸಾರಿದ್ದು, ದೇವನೂರು ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದೆ. ಮೈಸೂರು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ದೇವನೂರು ಗ್ರಾಮದ...
ನಕ್ಷೆಯಲ್ಲೇ ಇಲ್ಲದ ರಸ್ತೆಗೆ ₹5 ಲಕ್ಷ ಸ್ವಾಹಾ? ಉದಗಟ್ಟಿಯಲ್ಲಿ ‘ಸರ್ಕಾರಿ’ ಹಣಕ್ಕೆ ಕನ್ನ!
ರಾಣೇಬೆನ್ನೂರು: ಸರ್ಕಾರದ ನಿಯಮಗಳನ್ನು ಅಕ್ಷರಶಃ ಗಾಳಿಗೆ ತೂರಿ, ಸಾರ್ವಜನಿಕರ ತೆರಿಗೆ ಹಣವನ್ನು ಹಾಡಹಗಲೇ ಲೂಟಿ ಮಾಡುತ್ತಿರುವ ಆಘಾತಕಾರಿ ಪ್ರಕರಣ ತಾಲೂಕಿನ ಉದಗಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ಹಣ ಈಗ ಖಾಸಗಿ ಜಮೀನಿನ ಪಾಲಾಗುತ್ತಿರುವುದು ಸಾರ್ವಜನಿಕರ...
ಅಗ್ನಿಶಾಮಕ ಇಲಾಖೆಯಲ್ಲಿ ಬೃಹತ್ ನೇಮಕಾತಿ: 1,828 ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ (KSFES) ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1,828 ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಈ...
ಬೆಂಗಳೂರಿನಲ್ಲಿ ಬಸವ ಜಯಂತಿ ಸಂಭ್ರಮ: ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಳ್ಳಿ ರಥದ ಭವ್ಯ ಮೆರವಣಿಗೆ
ಬೆಂಗಳೂರು: “ಕಾಯಕವೇ ಕೈಲಾಸ” ಎಂಬ ಮಂತ್ರದೊಂದಿಗೆ 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ನಡೆಸಿದ ಜಗಜ್ಯೋತಿ ಬಸವಣ್ಣನವರ ಜಯಂತಿಯ ಅಂಗವಾಗಿ, ಏಪ್ರಿಲ್ 20ರ ಸೋಮವಾರದಂದು ರಾಜಧಾನಿಯಲ್ಲಿ ವೈಭವದ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಶ್ರೀ ವಾಟಾಳ್ ನಾಗರಾಜ್ ಅವರ...
ಹುಟ್ಟುಹಬ್ಬದ ಸಂಭ್ರಮದಲ್ಲಿ ಘೋರ ದುರಂತ: ಚಿಕನ್ ಮೂಳೆ ಗಂಟಲಲ್ಲಿ ಸಿಲುಕಿ ಯುವಕ ಸಾವು!
ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯ ಔತಣಕೂಟವೊಂದು ಯುವಕನೊಬ್ಬನ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿದ ಘಟನೆ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಊಟ ಮಾಡುವಾಗ ಆಕಸ್ಮಿಕವಾಗಿ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಉಸಿರುಗಟ್ಟಿದ ಪರಿಣಾಮ 21 ವರ್ಷದ ಯುವಕ ಮೃತಪಟ್ಟಿದ್ದಾನೆ. ಮೃತ ದುರ್ದೈವಿಯನ್ನು ಸಚಿನ್...
ತುಮಕೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ; ಆರು ಮಂದಿ ಕಿಲಾಡಿಗಳ ಬಂಧನ
ತುಮಕೂರು: ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಅಂತರ ಜಿಲ್ಲಾ ತಂಡವನ್ನು ತಿಲಕ್ ಪಾರ್ಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಬಂಧಿತರನ್ನು ಬೆಂಗಳೂರಿನ ಉಮರ್ (32), ನಜೀರ್ (35), ನವೀದ್ (32) ಮತ್ತು...
ಬೆಳಗಾವಿ: ಬಾಡಿಗೆ ಮನೆಯಲ್ಲಿ ಅಡಗಿಸಿದ್ದ ಡ್ರಗ್ಸ್ ಪತ್ತೆ; ಸಿಸಿಬಿ ದಾಳಿ, ಇಬ್ಬರು ಆರೋಪಿಗಳ ಬಂಧನ
ಬೆಳಗಾವಿ: ಜಿಲ್ಲೆಯ ಸುಳಗಾ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಬೆಳಗಾವಿ ಸಿಸಿಬಿ ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ‘ಪೆನ್ನಿ ಡ್ರಗ್ಸ್’ ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ಶ್ವಾನ...
ಬನ್ನೇರುಘಟ್ಟಕ್ಕೆ ಬಂದಿಳಿದ ಆಫ್ರಿಕಾದ ನಾಲ್ಕು ಚೀತಾಗಳು: ಮೃಗಾಲಯದಲ್ಲಿ ಇನ್ನು ‘ಶಿವಂಗಿ’ಗಳ ಘರ್ಜನೆ!
ಬೆಂಗಳೂರು (ಆನೇಕಲ್): ಬನ್ನೇರುಘಟ್ಟ ಜೈವಿಕ ಉದ್ಯಾನವನದ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪನೆಯಾಗಿದ್ದು, ದಕ್ಷಿಣ ಆಫ್ರಿಕಾದಿಂದ ನಾಲ್ಕು ಅಪರೂಪದ ಚೀತಾಗಳು (ಶಿವಂಗಿ) ನಗರಕ್ಕೆ ಆಗಮಿಸಿವೆ. ಆಫ್ರಿಕಾದ ಇಂಡುನಾ ಪ್ರೈಮೇಟ್ ಮತ್ತು ಪ್ಯಾರೆಟ್ ಪಾರ್ಕಿನಿಂದ ತರಿಸಲಾಗಿರುವ ಎರಡು ಗಂಡು ಮತ್ತು ಎರಡು ಹೆಣ್ಣು ಚೀತಾಗಳನ್ನು...
ಗಾಂಧಿನಗರದ ಅಂಗಡಿ ಮೇಲೆ ಉಪ್ಪಾರಪೇಟೆ ಪೊಲೀಸರ ದಾಳಿ, ಲಕ್ಷಾಂತರ ಮೌಲ್ಯದ ನಿಷೇಧಿತ ವಿದೇಶಿ ಸಿಗರೇಟ್‌ಗಳ ಜಪ್ತಿ, ಇಬ್ಬರು ಆರೋಪಿಗಳ ಬಂಧನ: ದೆಹಲಿ ಮೂಲದ ವ್ಯಕ್ತಿಗಾಗಿ ತಲಾಷ್
ಗಾಂಧಿನಗರದ ಅಂಗಡಿ ಮೇಲೆ ಉಪ್ಪಾರಪೇಟೆ ಪೊಲೀಸರ ದಾಳಿ, ಲಕ್ಷಾಂತರ ಮೌಲ್ಯದ ನಿಷೇಧಿತ ವಿದೇಶಿ ಸಿಗರೇಟ್‌ಗಳ ಜಪ್ತಿ, ಇಬ್ಬರು ಆರೋಪಿಗಳ ಬಂಧನ: ದೆಹಲಿ ಮೂಲದ ವ್ಯಕ್ತಿಗಾಗಿ ತಲಾಷ್ ನಗರದ ಮಧ್ಯಭಾಗ ಗಾಂಧಿನಗರದ ತ್ರಿಭುವನ್ ಬಿಲ್ಡಿಂಗ್‌ನಲ್ಲಿರುವ ಅಂಗಡಿ ಮತ್ತು ಗೋಡೌನ್ ಮೇಲೆ ಉಪ್ಪಾರಪೇಟೆ ಪೊಲೀಸರು...