ಮೊಬೈಲ್ ಕಳವಿಗೆ ಹೊಸ ಮಾದರಿ ಸೃಷ್ಟಿ, ಪಾರ್ಕಿಂಗ್ – ಹೈವೇ ದಾರಿಯಲ್ಲಿ ದೋಚುವ ಮುಷ್ಟಿ, ಹೆಚ್.ಎ.ಎಲ್ ಪೊಲೀಸರಿಂದ ಕಿಲಾಡಿ ಖದೀಮನ ಜಪ್ತಿ
ನಗರದ ವಿವಿಧೆಡೆ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ವಾಹನಗಳ ಗಾಜು ಒಡೆದು ಹಾಗೂ ಹೈವೇಗಳಲ್ಲಿ ವಿಶ್ರಮಿಸುತ್ತಿದ್ದ ಚಾಲಕರ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಹೆಚ್.ಎ.ಎಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 16 ಲಕ್ಷ ಮೌಲ್ಯದ 64 ಮೊಬೈಲ್ ಫೋನ್‌ಗಳನ್ನು ಹಾಗೂ ಕೃತ್ಯಕ್ಕೆ...
ಪುಷ್ಪ ಸಿನಿಮಾ ಶೈಲಿಯಲ್ಲಿ ಶ್ರೀಮಂತನಾಗಲು ಹೊರಟಿದ್ದವ ಅಂದರ್, ರಕ್ತಚಂದನ ತುಂಡುಗಳ ಮೂಟೆಯೊಂದಿಗೆ ಮಡಿವಾಳದಲ್ಲಿ ಹಾಜರ್, ನೇತೃತ್ವದ ವಹಿಸಿದ್ದ ಇನ್ಸ್‌ಪೆಕ್ಟರ್ ಮೊಹಮ್ಮದ್
ನಗರದಲ್ಲಿ ಅಕ್ರಮವಾಗಿ ರಕ್ತಚಂದನದ ತುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 7.12 ಲಕ್ಷ ಮೌಲ್ಯದ 285 ಕೆಜಿ ರಕ್ತಚಂದನವನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಮಾರ್ಚ್ 11ರಂದು ಸಿಲ್ಕ್ ಬೋರ್ಡ್ ಬಸ್ ನಿಲ್ದಾಣದ ಬಳಿಯ ಅರಣ್ಯ ಸರ್ವೀಸ್...
ಹಣ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿದರು, ಇದ್ದ ಹಣವನ್ನೂ ದೋಚಿ ಪಂಗನಾಮ ಹಾಕಿದರು, ಬಾಗಲಗುಂಟೆ ಪೊಲೀಸರ ಬಲೆಗೆ ಬಿದ್ದ ವಂಚಕರು
ಬಾಗಲಕುಂಟೆ ಠಾಣಾ ವ್ಯಾಪ್ತಿಯಲ್ಲಿ ಹಣವನ್ನು ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 40 ಲಕ್ಷ ನಗದು ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕೊಪ್ಪಳ ಜಿಲ್ಲೆಯ ಹಿಟ್ನಾಳ ಗ್ರಾಮದ...
ನ್ಯಾಯಾಲಯಗಳಲ್ಲಿ ಕೆಲಸದ ಆಮಿಷ, ನಂಬಿಕೆ ದ್ರೋಹ ಮಾಡಿದ ವಂಚಕರು ಸಿಸಿಬಿಗೆ ವಶ, ವಂಚನೆಯಿಂದ ಪಾರಾದವರ ಮುಖದಲ್ಲಿ ಹರುಷ
ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 450ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಆರು ಮಂದಿ ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 38 ಲಕ್ಷ ನಗದು ಹಣವನ್ನು...
ಮಾದಕ ಲೋಕದ ಜಾಲಕ್ಕೆ ಸಿಸಿಬಿ ಗಾಳ, ಐವರು ಅರೆಸ್ಟ್-ಕೋಟಿ ಕೋಟಿ ಮಾಲು ಸೀಜ್!
ನಗರದ ಯುವಜನತೆ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಜಾಲವನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಭೇದಿಸಿದೆ. ಕಾರ್ಯಾಚರಣೆಯಲ್ಲಿ ಹೊರರಾಜ್ಯದ ಓರ್ವ ವ್ಯಕ್ತಿ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಬರೋಬ್ಬರಿ...
ಮಾದಕ ವಸ್ತು ಜಾಲದ ವಿರುದ್ಧ ರಾಮನಗರ ನ್ಯಾಯಾಲಯದ ಚಾಟಿ: ನಾಲ್ವರು ಆರೋಪಿಗಳಿಗೆ 10 ವರ್ಷ ಜೈಲು, ಲಕ್ಷಾಂತರ ರೂ. ದಂಡ
ರಾಮನಗರ: ಜಿಲ್ಲೆಯ ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಭಾರಿ ಪ್ರಮಾಣದ ಮಾದಕ ವಸ್ತು ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಮನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ತಲಾ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ...
ಕುರಿ-ಮೇಕೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ, 2.80 ಲಕ್ಷ ರೂ. ಮೌಲ್ಯದ ಸ್ವತ್ತು ವಶ
ಬಿಡದಿ: ಫಾರಂ ಹೌಸ್ ಒಂದರ ಬೀಗ ಮುರಿದು ಕುರಿ ಮತ್ತು ಮೇಕೆಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಿಡದಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ....
ನಂಬಿಕೆ ದ್ರೋಹ: ಮಗಳ ವಯಸ್ಸಿನ ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಅಂಬುಲೆನ್ಸ್‌ನಲ್ಲೇ ಹೆರಿಗೆ
ಗುಂಡ್ಲುಪೇಟೆ: ತಾಲೂಕಿನ ದೇಶಿಪುರ ಗ್ರಾಮದಲ್ಲಿ ಮಾನವೀಯತೆ ಮರೆತ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಸಂಬಂಧಿಕನೇ ಆದ 46 ವರ್ಷದ ವ್ಯಕ್ತಿಯೊಬ್ಬ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ, ಬಾಲಕಿ ಅಂಬುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ...
ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಭೀಕರ ಕೊಲೆ; ಹಳೇ ದ್ವೇಷಕ್ಕೆ ಯುವಕ ಬಲಿ?
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕ್ರಿಮಿನಲ್‌ಗಳ ಅಟ್ಟಹಾಸ ಮುಂದುವರಿದಿದ್ದು, ಇಂದು ಮುಂಜಾನೆ ರಾಮಮೂರ್ತಿ ನಗರದ ಟಿ.ಸಿ. ಪಾಳ್ಯ ಮುಖ್ಯರಸ್ತೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನ ಶವ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಮೃತನನ್ನು ಕಿರಣ್...
ಭಟ್ಕಳ: ಅಕ್ರಮ ಜಾನುವಾರು ಸಾಗಾಟ ಜಾಲದ ಮೇಲೆ ಪೊಲೀಸರ ಸರಣಿ ದಾಳಿ; 23 ಜಾನುವಾರುಗಳ ರಕ್ಷಣೆ
ಭಟ್ಕಳ: ತಾಲೂಕಿನಲ್ಲಿ ಬೇರುಬಿಟ್ಟಿರುವ ಅಕ್ರಮ ಜಾನುವಾರು ಸಾಗಾಟ ಜಾಲದ ಮೇಲೆ ಭಟ್ಕಳ ಪೊಲೀಸರು ಸಮರ ಸಾರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಎರಡು ಪ್ರತ್ಯೇಕ ಕಡೆಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು, ವಧೆಗಾಗಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 23 ಜಾನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ....