Subscribe Now
Trending News

Category: ಪೊಲೀಸ್ ಸುದ್ದಿಗಳು

ಕ್ರೈಂ ಸುದ್ದಿಗಳು

ಬೆಂಗಳೂರಲ್ಲಿ ಭೀಕರ ಘಟನೆ: 7ನೇ ಮಹಡಿಯಿಂದ ಬಿದ್ದು ಸಾಫ್ಟ್‌ವೇರ್ ಎಂಜಿನಿಯರ್ ಯುವತಿ ಸಾವು, ಯುವಕನಿಗೆ ಗಂಭೀರ ಗಾಯ 

ಬೆಂಗಳೂರು ನಗರದ ವೈಟ್‌ಫೀಲ್ಡ್ ಭಾಗದ ಖಾಸಗಿ ಕೋ-ಲಿವಿಂಗ್ ಪಿಜಿಯ 7ನೇ ಮಹಡಿಯಿಂದ ಕೆಳಗೆ ಬಿದ್ದು ಸಾಫ್ಟ್‌ವೇರ್ ಎಂಜಿನಿಯರ್ ಯುವತಿ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ​ಪಾಂಡಿಚೇರಿ ಮೂಲದ ಜನನಿ (ಸಾಫ್ಟ್‌ವೇರ್ ಎಂಜಿನಿಯರ್) ಮೃತಪಟ್ಟ ದುರದೃಷ್ಟಕರ ಯುವತಿಯಾಗಿದ್ದು,...
ಪೊಲೀಸ್ ಸುದ್ದಿಗಳು

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಹುತಾತ್ಮರಾದ ಸಿಇಎನ್ ಇನ್‌ಸ್ಪೆಕ್ಟರ್ ರವಿ ಕೆ.ಬಿ.: ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ! 

ಮೈಸೂರು: ಮಧ್ಯಪ್ರದೇಶದಲ್ಲಿ ಕರ್ತವ್ಯ ನಿಮಿತ್ತ ತೆರಳಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಕಾಲಿಕವಾಗಿ ವಿಧಿವಶರಾದ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ (CEN) ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರವಿ ಕೆ.ಬಿ. ಅವರ ಪಾರ್ಥಿವ ಶರೀರಕ್ಕೆ ಇಂದು ಅವರ ಸ್ವಗ್ರಾಮದಲ್ಲಿ ಮೈಸೂರು ಜಿಲ್ಲಾ...
ಜಿಲ್ಲಾ ಸುದ್ದಿಗಳು

ಉತ್ತಮ ಸೇವೆಗೆ ಪೊಲೀಸ್ ವರಿಷ್ಠಾಧಿಕಾರಿಯಿಂದ ಡಿವೈಎಸ್ಪಿ ಐ.ಪಿ. ಮೇದಪ್ಪ ಅವರಿಗೆ ಪ್ರಶಂಸಾ ಪತ್ರ! 

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಅತ್ಯುತ್ತಮವಾಗಿ ನಿರ್ವಹಿಸಿ, ದಕ್ಷ ಕರ್ತವ್ಯ ಪ್ರಜ್ಞೆ ಮೆರೆದ ಜಿಲ್ಲಾ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ಐ.ಪಿ. ಮೇದಪ್ಪ ಅವರಿಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಬಿಂದುಮಣಿ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ....
ಕ್ರೈಂ ಸುದ್ದಿಗಳು

ಮಂಡ್ಯ ಜನರ ಸಾಹಸ: ಕೈಬೇಡಿ ಸಮೇತ ಓಡುತ್ತಿದ್ದ ಕಳ್ಳನನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು! 

ಮಂಡ್ಯ: ಪೊಲೀಸ್ ಠಾಣೆಯಿಂದ ಕೈಗೆ ಬೇಡಿ ಸಮೇತ ಎಸ್ಕೇಪ್ ಆಗಿದ್ದ ಖದೀಮನೊಬ್ಬನನ್ನು ಸಾರ್ವಜನಿಕರು ಚೇಸ್ ಮಾಡಿ ಹಿಡಿದು ಮತ್ತೆ ಪೊಲೀಸರಿಗೆ ಒಪ್ಪಿಸಿರುವ ಸಿನಿಮೀಯ ಮಾದರಿಯ ಘಟನೆ ಮಂಡ್ಯ ನಗರದ ಗಾಂಧಿನಗರ ಬಡಾವಣೆಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ​ಘಟನೆಯ ವಿವರ: ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ...
ಕ್ರೈಂ ಸುದ್ದಿಗಳು

ಸರಣಿ ಕಳ್ಳತನ ಎಸಗುತ್ತಿದ್ದ ಮೂವರು ಆರೋಪಿಗಳ ಬಂಧನ – ₹20.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳು ಜಪ್ತಿ 

ಮಾಗಡಿ: ಮಾಗಡಿ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ ಎಸಗಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಾಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡ ಯಶಸ್ವಿಯಾಗಿದೆ. ​ಬಂಧಿತರಿಂದ ಸುಮಾರು ₹20,5,000 ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳು,...
ಕ್ರೈಂ ಸುದ್ದಿಗಳು

ಬೊಮ್ಮನಹಳ್ಳಿಯಲ್ಲಿ ಮಧ್ಯರಾತ್ರಿ ಸಿನೆಮಾ ಮಾದರಿ ಫೈರಿಂಗ್ – ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿಯ ಕಾಲಿಗೆ ಬಿತ್ತು ಗುಂಡು 

ಬೆಂಗಳೂರು: ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಆರೋಪಿಯೊಬ್ಬ ಪೊಲೀಸರ ಮೇಲೆಯೇ ಆಯುಧದಿಂದ ಭೀಕರ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದಾಗ, ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬೊಮ್ಮನಹಳ್ಳಿ ಸಮೀಪದ ಸೋಮಸುಂದರಪಾಳ್ಯದಲ್ಲಿ ಮಧ್ಯರಾತ್ರಿ ನಡೆದಿದೆ. ​ಬಂಡೇಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ...
ಕ್ರೈಂ ಸುದ್ದಿಗಳು

ನಿಯಮ ಉಲ್ಲಂಘಿಸಿ ಸಾಗಿಸುತ್ತಿದ್ದ 1,033 ಕೆ.ಜಿ. ಕೋಳಿ ಮಾಂಸ ಸೀಜ್ 

ರಾಣೇಬೆನ್ನೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ನಿಯಮಗಳನ್ನು ಗಾಳಿಗೆ ತೂರಿ ಸೂಕ್ತ ರೀತಿಯಲ್ಲಿ ಪ್ಯಾಕಿಂಗ್ ಮಾಡದೇ ಸಾಗಿಸಲಾಗುತ್ತಿದ್ದ ಒಟ್ಟು 1,033 ಕೆ.ಜಿ. ಕೋಳಿ ಮಾಂಸವನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ​ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಬೆಂಗಳೂರು ಇಲಾಖೆಯ...
ಜಿಲ್ಲಾ ಸುದ್ದಿಗಳು

ಚಿತ್ರದುರ್ಗ: ಸೆ.19 ರ ರಾಷ್ಟ್ರೀಯ ಲೋಕ ಅದಾಲತ್ ಹಿನ್ನೆಲೆ – ಜಿಲ್ಲಾ ನ್ಯಾಯಾಲಯದಲ್ಲಿ ಪೂರ್ವಭಾವಿ ಸಭೆ 

ಚಿತ್ರದುರ್ಗ : ರಾಜ್ಯಾದ್ಯಂತ ದಿನಾಂಕ 19.09.2026 ರಂದು ನಡೆಯಲಿರುವ ‘ರಾಷ್ಟ್ರೀಯ ಲೋಕ ಅದಾಲತ್’ ಆಯೋಜನೆ ಹಿನ್ನೆಲೆಯಲ್ಲಿ, ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ​ಗೌರವನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಜಿ.ಡಿ. ಮಹಾವರ್ಕರ್ ಅವರ ಅಧ್ಯಕ್ಷತೆಯಲ್ಲಿ ಈ...
ಕ್ರೈಂ ಸುದ್ದಿಗಳು

ಮಾದಕ ವ್ಯಸನ ನಿಯಂತ್ರಣಕ್ಕೆ ಇಲಾಖೆಗಳ ಸಮನ್ವಯ ಅಗತ್ಯ – ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ 

ಹಾವೇರಿ : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಹಾಗೂ ಅಕ್ರಮ ಸಾಗಾಣಿಕೆಯನ್ನು ತಡೆಗಟ್ಟಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಹಾವೇರಿಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿ ರೂಪಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಯಶೋಧಾ ವಂಟಗೋಡಿ ಕರೆ ನೀಡಿದ್ದಾರೆ. ​ಜಿಲ್ಲಾ...
ಅರಣ್ಯ ಇಲಾಖೆ

ಕರ್ನಾಟಕ–ತಮಿಳುನಾಡು ಗಡಿ ಚೆಕ್‌ಪೋಸ್ಟ್‌ಗಳಿಗೆ ಪೊಲೀಸ್ ಅಧಿಕಾರಿಗಳ ಭೇಟಿ; ಭದ್ರತಾ ವ್ಯವಸ್ಥೆ ತೀವ್ರ ಪರಿಶೀಲನೆ 

ಕರ್ನಾಟಕ–ತಮಿಳುನಾಡು ಗಡಿ ಪ್ರದೇಶಗಳಲ್ಲಿ ಸೂಕ್ಷ್ಮ ನಿಗಾ ವಹಿಸುವ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಂಗಳವಾರ ವಿವಿಧ ಪ್ರಮುಖ ಗಡಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ​ದಿನಾಂಕ 25-08-2026 ರಂದು ಅಧಿಕಾರಿಗಳ ತಂಡವು...