ನ್ಯಾಯಾಲಯಗಳಲ್ಲಿ ಕೆಲಸದ ಆಮಿಷ, ನಂಬಿಕೆ ದ್ರೋಹ ಮಾಡಿದ ವಂಚಕರು ಸಿಸಿಬಿಗೆ ವಶ, ವಂಚನೆಯಿಂದ ಪಾರಾದವರ ಮುಖದಲ್ಲಿ ಹರುಷ
ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 450ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಆರು ಮಂದಿ ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 38 ಲಕ್ಷ ನಗದು ಹಣವನ್ನು...
ಮಾದಕ ಲೋಕದ ಜಾಲಕ್ಕೆ ಸಿಸಿಬಿ ಗಾಳ, ಐವರು ಅರೆಸ್ಟ್-ಕೋಟಿ ಕೋಟಿ ಮಾಲು ಸೀಜ್!
ನಗರದ ಯುವಜನತೆ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಜಾಲವನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಭೇದಿಸಿದೆ. ಕಾರ್ಯಾಚರಣೆಯಲ್ಲಿ ಹೊರರಾಜ್ಯದ ಓರ್ವ ವ್ಯಕ್ತಿ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಬರೋಬ್ಬರಿ...
ಮಾದಕ ವಸ್ತು ಜಾಲದ ವಿರುದ್ಧ ರಾಮನಗರ ನ್ಯಾಯಾಲಯದ ಚಾಟಿ: ನಾಲ್ವರು ಆರೋಪಿಗಳಿಗೆ 10 ವರ್ಷ ಜೈಲು, ಲಕ್ಷಾಂತರ ರೂ. ದಂಡ
ರಾಮನಗರ: ಜಿಲ್ಲೆಯ ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಭಾರಿ ಪ್ರಮಾಣದ ಮಾದಕ ವಸ್ತು ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಮನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ತಲಾ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ...
ಕುರಿ-ಮೇಕೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ, 2.80 ಲಕ್ಷ ರೂ. ಮೌಲ್ಯದ ಸ್ವತ್ತು ವಶ
ಬಿಡದಿ: ಫಾರಂ ಹೌಸ್ ಒಂದರ ಬೀಗ ಮುರಿದು ಕುರಿ ಮತ್ತು ಮೇಕೆಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಿಡದಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ....
ನಂಬಿಕೆ ದ್ರೋಹ: ಮಗಳ ವಯಸ್ಸಿನ ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಅಂಬುಲೆನ್ಸ್‌ನಲ್ಲೇ ಹೆರಿಗೆ
ಗುಂಡ್ಲುಪೇಟೆ: ತಾಲೂಕಿನ ದೇಶಿಪುರ ಗ್ರಾಮದಲ್ಲಿ ಮಾನವೀಯತೆ ಮರೆತ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಸಂಬಂಧಿಕನೇ ಆದ 46 ವರ್ಷದ ವ್ಯಕ್ತಿಯೊಬ್ಬ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ, ಬಾಲಕಿ ಅಂಬುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ...
ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಭೀಕರ ಕೊಲೆ; ಹಳೇ ದ್ವೇಷಕ್ಕೆ ಯುವಕ ಬಲಿ?
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕ್ರಿಮಿನಲ್‌ಗಳ ಅಟ್ಟಹಾಸ ಮುಂದುವರಿದಿದ್ದು, ಇಂದು ಮುಂಜಾನೆ ರಾಮಮೂರ್ತಿ ನಗರದ ಟಿ.ಸಿ. ಪಾಳ್ಯ ಮುಖ್ಯರಸ್ತೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನ ಶವ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಮೃತನನ್ನು ಕಿರಣ್...
ಭಟ್ಕಳ: ಅಕ್ರಮ ಜಾನುವಾರು ಸಾಗಾಟ ಜಾಲದ ಮೇಲೆ ಪೊಲೀಸರ ಸರಣಿ ದಾಳಿ; 23 ಜಾನುವಾರುಗಳ ರಕ್ಷಣೆ
ಭಟ್ಕಳ: ತಾಲೂಕಿನಲ್ಲಿ ಬೇರುಬಿಟ್ಟಿರುವ ಅಕ್ರಮ ಜಾನುವಾರು ಸಾಗಾಟ ಜಾಲದ ಮೇಲೆ ಭಟ್ಕಳ ಪೊಲೀಸರು ಸಮರ ಸಾರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಎರಡು ಪ್ರತ್ಯೇಕ ಕಡೆಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು, ವಧೆಗಾಗಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 23 ಜಾನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಬೊಮ್ಮನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದ್ವಿಚಕ್ರ ವಾಹನಗಳ ಖದೀಮನ ಬಂಧನ, 5 ಲಕ್ಷ ಮೌಲ್ಯದ 10 ಬೈಕ್‌ಗಳು ವಶ
ಬೆಂಗಳೂರು: ನಗರದ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಮೂಲಕ ಒಟ್ಟು 10 ಕಳವು ಪ್ರಕರಣಗಳು ಪತ್ತೆಯಾಗಿವೆ....
ಕರ್ತವ್ಯನಿರತ ಟ್ರಾಫಿಕ್ ವಾರ್ಡನ್‌ಗೆ ಅಪಘಾತ: ಆರ್ಥಿಕ ಸಂಕಷ್ಟದಲ್ಲಿ ಕುಟುಂಬ – ನೆರವಿಗಾಗಿ ಮೊರೆ
ಬೆಂಗಳೂರು: ಸಮಾಜ ಸೇವೆಯ ಹಂಬಲದಿಂದ ಸಂಚಾರಿ ನಿಯಮ ಪಾಲನೆಗೆ ಶ್ರಮಿಸುತ್ತಿದ್ದ ಟ್ರಾಫಿಕ್ ವಾರ್ಡನ್ ಒಬ್ಬರು ಭೀಕರ ಅಪಘಾತಕ್ಕೆ ತುತ್ತಾಗಿ, ಇಂದು ಚಿಕಿತ್ಸಾ ವೆಚ್ಚ ಭರಿಸಲಾಗದೆ ಆರ್ಥಿಕವಾಗಿ ಹೈರಾಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿವರ: ಪೀಣ್ಯದ ಮೈನಿ ಪ್ರಿಸಿಸನ್ ಪ್ರೊಡೆಕ್ಟ್ ಕಂಪನಿಯಲ್ಲಿ...
ಒಂದೇ ದಿನ ಎರಡು ಕಡೆ ದರೋಡೆ ಮಾಡಿದ್ದ ಗ್ಯಾಂಗ್ ಸೆರೆ: ಹಲಸೂರು ಪೊಲೀಸರ ಭರ್ಜರಿ ಕಾರ್ಯಾಚರಣೆ
ಬೆಂಗಳೂರು: ರಾಜಧಾನಿಯಲ್ಲಿ ಸಾರ್ವಜನಿಕರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ಖತರ್ನಾಕ್ ತಂಡವೊಂದನ್ನು ಹಲಸೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ಅಂದಾಜು ₹ 75,000 ಎಂದು ತಿಳಿದುಬಂದಿದೆ....