ಚನ್ನಪಟ್ಟಣ: ಚಲಿಸುತ್ತಿದ್ದ ಬೈಕ್ ಮೇಲೆ ಕರಡಿ ದಾಳಿ; ಸವಾರ ಪ್ರಾಣಾಪಾಯದಿಂದ ಪಾರು
ಚನ್ನಪಟ್ಟಣ: ತಾಲೂಕಿನ ಕೋಡಂಬಳ್ಳಿ-ಸಿಂಗರಾಜಿಪುರ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಕರಡಿಯೊಂದು ಭೀಕರ ದಾಳಿ ನಡೆಸಿದ್ದು, ಸವಾರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ-ಸಿಂಗರಾಜಿಪುರ ರಸ್ತೆಯ ದುಂಡುಮಾರಮ್ಮ ದೇವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ. ವ್ಯಕ್ತಿಯೊಬ್ಬರು ತಮ್ಮ...
ಬೆಂಗಳೂರು: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ಬಾಲಕಿ ಭೀಕರ ಕೊಲೆ; ಅತ್ಯಾಚಾರದ ಶಂಕೆ
ಬೆಂಗಳೂರು: ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಶವ ಶನಿವಾರ ಸಂಜೆ ಭೀಕರ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಸ್ಸಾಂ ಮೂಲದ ಈ ಬಾಲಕಿ ವಿಟ್ಟಸಂದ್ರ ಸಮೀಪದ...
ಶಿರಸಿಯ ‘ಸಿಂಗಂ’ ಖ್ಯಾತಿಯ ಪಿಎಸ್‌ಐ ರಾಜಕುಮಾರ್ ಉಕ್ಕಲಿಗೆ 2025ರ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ ಗೌರವ
ಶಿರಸಿ: ಕರ್ತವ್ಯನಿಷ್ಠೆ, ಅದಮ್ಯ ಸಾಹಸ ಮತ್ತು ಅಪರಾಧ ಪತ್ತೆ ಹಚ್ಚುವಲ್ಲಿ ತೋರಿದ ಅಪ್ರತಿಮ ದಕ್ಷತೆಗಾಗಿ ಶಿರಸಿ ಮಾರ್ಕೆಟ್ ಠಾಣೆಯ ಕ್ರೈಂ ಪಿಎಸ್‌ಐ ರಾಜಕುಮಾರ್ ಉಕ್ಕಲಿ ಅವರು 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿಯವರ ಪದಕಕ್ಕೆ ಭಾಜನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕ್ರಿಯಾಶೀಲ ಮತ್ತು...
ಬೆಕ್ಕಿನ ಹೆಜ್ಜೆ ಇಟ್ಟ ಪ್ರೊಫೆಸರ್ ಅಬ್ದುಲ್ ಅರೆಸ್ಟ್: ಕ್ಲಾಸಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ ಚಪ್ಪಲಿ ಸೇವೆ ಪಡೆದ ಕಾಮುಕ!
ನೆಲಮಂಗಲ: ತರಗತಿಯಲ್ಲಿ ಪಾಠ ಮಾಡಬೇಕಾದ ಅಸಿಸ್ಟೆಂಟ್ ಪ್ರೊಫೆಸರ್ ಒಬ್ಬ ವಿದ್ಯಾರ್ಥಿನಿಗೆ ಮೈಕ್‌ನಲ್ಲೇ ಪ್ರಪೋಸ್ ಮಾಡಿ ಪೊಲೀಸರ ಅತಿಥಿಯಾದ ಘಟನೆ ನೆಲಮಂಗಲದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಆರೋಪಿ ಅಬ್ದುಲ್ ಎಂಬಾತನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಸಿಸ್ಟೆಂಟ್ ಪ್ರೊಫೆಸರ್...
ಸಕಲೇಶಪುರ: ಪ್ರೀ-ವೆಡ್ಡಿಂಗ್ ಫೋಟೋಶೂಟ್ ವೇಳೆ ಭೀಕರ ದಾಳಿ; ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ, ಲಕ್ಷಾಂತರ ಮೌಲ್ಯದ ಕ್ಯಾಮೆರಾ ಪುಡಿ
ಸಕಲೇಶಪುರ (ಮಾರ್ಚ್ 28, 2026): ಇಲ್ಲಿನ ಸುಂದರ ಪ್ರವಾಸಿ ತಾಣವಾದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿ ವರ್ತನೆಯ ಕಿಡಿಗೇಡಿಗಳ ಗುಂಪೊಂದು ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ. ದಾಳಿಯ ವೇಳೆ ಲಕ್ಷಾಂತರ ರೂಪಾಯಿ...
ನಾಳೆಯಿಂದ ಐಪಿಎಲ್ ಹಬ್ಬ: ಭದ್ರತೆ ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಮಹತ್ವದ ಸಭೆ
ಬೆಂಗಳೂರು: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಪಂದ್ಯಾವಳಿಗಳು ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರು ಇಂದು ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆ ನಡೆಸಿದರು. ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ ಕರ್ನಾಟಕ...
ಮೊಬೈಲ್ ಕಳವಿಗೆ ಹೊಸ ಮಾದರಿ ಸೃಷ್ಟಿ, ಪಾರ್ಕಿಂಗ್ – ಹೈವೇ ದಾರಿಯಲ್ಲಿ ದೋಚುವ ಮುಷ್ಟಿ, ಹೆಚ್.ಎ.ಎಲ್ ಪೊಲೀಸರಿಂದ ಕಿಲಾಡಿ ಖದೀಮನ ಜಪ್ತಿ
ನಗರದ ವಿವಿಧೆಡೆ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ವಾಹನಗಳ ಗಾಜು ಒಡೆದು ಹಾಗೂ ಹೈವೇಗಳಲ್ಲಿ ವಿಶ್ರಮಿಸುತ್ತಿದ್ದ ಚಾಲಕರ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಹೆಚ್.ಎ.ಎಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 16 ಲಕ್ಷ ಮೌಲ್ಯದ 64 ಮೊಬೈಲ್ ಫೋನ್‌ಗಳನ್ನು ಹಾಗೂ ಕೃತ್ಯಕ್ಕೆ...
ರಾಣೆಬೆನ್ನೂರಿನಲ್ಲಿ ವರುಣನ ಅಬ್ಬರ: ಮರ ಬಿದ್ದು ಆಟೋ ಜಖಂ, ಹತ್ತಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಸಮ
ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ದಿಢೀರ್ ಸಂಭವಿಸಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ರಭಸಕ್ಕೆ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ವಾಹನ ಸಂಪೂರ್ಣ ಜಖಂಗೊಂಡಿದ್ದು, ಹಲವೆಡೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ನಗರದ ಗಡಾದ...
ಕುರಿ-ಮೇಕೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ, 2.80 ಲಕ್ಷ ರೂ. ಮೌಲ್ಯದ ಸ್ವತ್ತು ವಶ
ಬಿಡದಿ: ಫಾರಂ ಹೌಸ್ ಒಂದರ ಬೀಗ ಮುರಿದು ಕುರಿ ಮತ್ತು ಮೇಕೆಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಿಡದಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ....
ಬಡತನದ ಬೇಗೆಗೆ ಬೆನ್ನುಮಾಡಿದ್ದ ವಿದ್ಯಾರ್ಥಿನಿ: ದ್ರಾಕ್ಷಿ ತೋಟದಿಂದ ಪರೀಕ್ಷಾ ಕೇಂದ್ರಕ್ಕೆ ಕರೆತಂದ ಅಧಿಕಾರಿಗಳು
ಗದಗ: ಬಡತನದ ಕಾರಣಕ್ಕಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕೈಬಿಟ್ಟು ಕೂಲಿ ಕೆಲಸಕ್ಕೆ ತೆರಳಿದ್ದ ಬಾಲಕಿಯೊಬ್ಬಳನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಕಾಲದಲ್ಲಿ ಪತ್ತೆಹಚ್ಚಿ, ಆಕೆಗೆ ಪರೀಕ್ಷೆ ಬರೆಸುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬರದೂರು ಗ್ರಾಮದ ವಿದ್ಯಾರ್ಥಿನಿಯೊಬ್ಬಳು...