ವಿಶಾಖಪಟ್ಟಣಂ: ಅಕ್ರಮ ಸಂಬಂಧದ ಅಂತ್ಯ; ವಿವಾಹಿತ ಮಹಿಳೆಯನ್ನು ಕೊಂದು ದೇಹದ ಅರ್ಧಭಾಗ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
ವಿಶಾಖಪಟ್ಟಣಂ: ಅಕ್ರಮ ಸಂಬಂಧದ ವಿವಾದವೊಂದು ವಿಕೋಪಕ್ಕೆ ತಿರುಗಿ, ನೌಕಾಪಡೆಯ ಉದ್ಯೋಗಿಯೊಬ್ಬ ವಿವಾಹಿತ ಮಹಿಳೆಯನ್ನು ಅತ್ಯಂತ ಬರ್ಬರವಾಗಿ ಕೊಲೆ ಮಾಡಿ, ಮೃತದೇಹವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿ ಬಚ್ಚಿಟ್ಟ ಘಟನೆ ಜಿಲ್ಲೆಯ ಗಾಜುವಾಕದಲ್ಲಿ ಬೆಳಕಿಗೆ ಬಂದಿದೆ. ಆರೋಪಿ ರವೀಂದ್ರ ಮೂಲತಃ ವಿಜಯನಗರ ಜಿಲ್ಲೆಯವನಾಗಿದ್ದು, ವಿಶಾಖಪಟ್ಟಣಂನಲ್ಲಿ ನೌಕಾಪಡೆಯಲ್ಲಿ...
ಸಂಕಷ್ಟದಲ್ಲಿ ಸಿದ್ದರಾಮಯ್ಯ ಅವರ ‘ಕನಸಿನ ಯೋಜನೆ’: ಮೈಸೂರಿನಲ್ಲೇ ಇಂದಿರಾ ಕ್ಯಾಂಟೀನ್‌ಗಳಿಗೆ ₹4.49 ಕೋಟಿ ಬಾಕಿ!
ಮೈಸೂರು: ಹಸಿವು ಮುಕ್ತ ಕರ್ನಾಟಕ ನಿರ್ಮಿಸುವ ಆಶಯದೊಂದಿಗೆ ಆರಂಭವಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ‘ಇಂದಿರಾ ಕ್ಯಾಂಟೀನ್’ ಯೋಜನೆ ಇದೀಗ ಸ್ವತಃ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 26 ಕ್ಯಾಂಟೀನ್‌ಗಳ ಗುತ್ತಿಗೆದಾರರಿಗೆ ಸರ್ಕಾರದಿಂದ ಬರಬೇಕಾದ...
ಪಾವಗಡ: ಕುರಿಗಳ ಹಿಂಡಿನ ಮೇಲೆ ಬೀದಿ ನಾಯಿಗಳ ಭೀಕರ ದಾಳಿ; 20 ಕುರಿಗಳು ಸಾವು, ಕುರಿಗಾಹಿ ಕಂಗಾಲು
ಪಾವಗಡ: ತಾಲೂಕಿನ ಕ್ಯಾತಗಾನಕೆರೆ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ಬೀದಿ ನಾಯಿಗಳ ಗುಂಪೊಂದು ಕುರಿಗಳ ಹಿಂಡಿನ ಮೇಲೆ ದಾಳಿ ನಡೆಸಿದ ಪರಿಣಾಮ ಸುಮಾರು 20 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಗ್ರಾಮದ ನಿವಾಸಿ ವೆಂಕಟೇಶ್ (ನಾರಾಯಣಪ್ಪ ಅವರ ಪುತ್ರ) ಎಂಬುವವರಿಗೆ...
ಹುಣಸೂರು: ತೋಟದ ಮನೆಯಲ್ಲಿ ಸಿಂಥೆಟಿಕ್ ಡ್ರಗ್ಸ್ ಅಡ್ಡೆ ಮೇಲೆ ಪೊಲೀಸರ ದಾಳಿ; 25 ಕೆಜಿ ಮಾದಕ ದ್ರವ್ಯ ಜಪ್ತಿ
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ತೋಟದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 25 ಕೆಜಿಗೂ ಹೆಚ್ಚು ಸಿಂಥೆಟಿಕ್ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಹುಣಸೂರು ತಾಲೂಕಿನ ದಾಸನಪುರ-ರತ್ನಪುರಿ ಮಾರ್ಗಮಧ್ಯೆ ಇರುವ ಇರ್ಫಾನ್ ಎಂಬುವವರಿಗೆ ಸೇರಿದ ತೋಟದಲ್ಲಿ ಈ...
ನಟ ವರುಣ್ ಧವನ್ ಪುತ್ರಿಗೆ ಅಪರೂಪದ ‘DDH’ ಕಾಯಿಲೆ: ಮಗಳ ಆರೋಗ್ಯದ ಬಗ್ಗೆ ಆತಂಕಕಾರಿ ವಿಷಯ ಬಿಚ್ಚಿಟ್ಟ ನಟ
ಮುಂಬಯಿ: ಬಾಲಿವುಡ್‌ನ ಖ್ಯಾತ ನಟ ವರುಣ್ ಧವನ್ ತಮ್ಮ ಪುತ್ರಿ ಲಾರಾ ಅವರ ಆರೋಗ್ಯದ ಕುರಿತು ಶಾಕಿಂಗ್ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಮಗಳು DDH (ಡೆವಲಪ್‌ಮೆಂಟಲ್ ಡಿಸ್ಪ್ಲಾಸಿಯಾ ಆಫ್ ದಿ ಹಿಪ್) ಎಂಬ ಕಾಯಿಲೆಯಿಂದ ಬಳಲುತ್ತಿದ್ದರು ಎಂಬ ವಿಷಯವನ್ನು ಬಹಿರಂಗಪಡಿಸಿದ್ದು, ಸದ್ಯ...
ವಿಜಯಪುರ: ಎಣ್ಣೆಗಾಗಿ ಮೊಬೈಲ್ ಟವರ್ ಏರಿ ಕುಡುಕನ ಹೈಡ್ರಾಮಾ; ಮದ್ಯ ನೀಡುವಂತೆ ಪಟ್ಟು ಹಿಡಿದ ವ್ಯಸನಿ!
ವಿಜಯಪುರ: ಮದ್ಯಕ್ಕಾಗಿ ವ್ಯಸನಿಯೊಬ್ಬ ಮೊಬೈಲ್ ಟವರ್ ಏರಿ ಹುಚ್ಚಾಟ ಮೆರೆದ ಘಟನೆ ಜಿಲ್ಲೆಯ ತಿಕೋಟ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಭಾನುವಾರ ನಡೆದಿದೆ. “ಮದ್ಯ ಕೊಟ್ಟರೆ ಮಾತ್ರ ಕೆಳಗೆ ಇಳಿಯುತ್ತೇನೆ” ಎಂದು ಪಟ್ಟು ಹಿಡಿದ ವ್ಯಕ್ತಿಯ ಕೃತ್ಯದಿಂದ ಗ್ರಾಮಸ್ಥರು ಕೆಲಕಾಲ ಆತಂಕಕ್ಕೀಡಾಗಿದ್ದರು. ಕೋಟ್ಯಾಳ...
ಜೋಯಿಡಾ: ಕಾಂಕ್ರೀಟ್ ಪಂಪ್‌ನಲ್ಲಿ ಮದ್ಯ ಸಾಗಾಟ; ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ, ₹45 ಲಕ್ಷದ ಸ್ವತ್ತು ಜಪ್ತಿ
ಜೋಯಿಡಾ: ಗೋವಾ-ಕರ್ನಾಟಕ ಗಡಿಭಾಗದ ಅನಮೋಡ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಾಂಕ್ರೀಟ್ ಪಂಪ್ ಯಂತ್ರದೊಳಗೆ ಅಡಗಿಸಿಟ್ಟು ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ಚಾಲಕನನ್ನು ಬಂಧಿಸಲಾಗಿದ್ದು, ಒಟ್ಟು ₹45 ಲಕ್ಷ...
ಹೊನ್ನಾವರ: ಯು.ಕೆ. ಸೌಹಾರ್ದ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ; ಲಾಕರ್ ಹಾಗೂ ದಾಖಲೆಗಳು ಸುರಕ್ಷಿತ
ಹೊನ್ನಾವರ: ಇಲ್ಲಿನ ಬಸ್ ನಿಲ್ದಾಣದ ಸಮೀಪವಿರುವ ಜೇನು ಸೊಸೈಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಯಲ್ಲಾಪುರದ ಯು.ಕೆ. ಸೌಹಾರ್ದ ಸಹಕಾರಿ ಬ್ಯಾಂಕಿನ ಹೊನ್ನಾವರ ಶಾಖೆಯಲ್ಲಿ ಭಾನುವಾರ ಮಧ್ಯಾಹ್ನ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮ್ಯಾನೇಜರ್ ಕ್ಯಾಬಿನ್ ಸುಟ್ಟು ಕರಕಲಾಗಿದ್ದರೂ, ಬ್ಯಾಂಕಿನ ಲಾಕರ್...
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಅಪರಾಧ ಒಪ್ಪಿಕೊಂಡ ಶಂಕಿತ ಉಗ್ರ ಶಾರೀಕ್
ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ 2022ರ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್, ಕೊನೆಗೂ ಎನ್‌ಐಎ (NIA) ವಿಶೇಷ ನ್ಯಾಯಾಲಯದ ಮುಂದೆ ತನ್ನ ತಪ್ಪು ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಆತ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯವು ಅಧಿಕೃತವಾಗಿ...
ಬಿರಿಯಾನಿ ಸವಿಯಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ರಸ್ತೆ ಅಪಘಾತಕ್ಕೆ ಬಲಿ: ನೆಲಮಂಗಲದಲ್ಲಿ ಭೀಕರ ದುರಂತ
ನೆಲಮಂಗಲ: ಮಧ್ಯರಾತ್ರಿ ಬಿರಿಯಾನಿ ಸವಿಯಲೆಂದು ಬೈಕ್ ರೈಡ್ ಹೊರಟಿದ್ದ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನೆಲಮಂಗಲ ಸಮೀಪದ ಸೋಲೂರು ಬಳಿ ನಡೆದಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೋಲೂರು ಸಮೀಪದ ಮರೂರು ಹ್ಯಾಂಡ್ ಪೋಸ್ಟ್...