ಚಾಮರಾಜನಗರ: ಜೀವಂತ ಉಡವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಪಾಪನಕೆರೆ ಬಳಿ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ದಾಳಿ ನಡೆಸಿ, ಈ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಜಮೀರುಲ್ಲಾ ಶರೀಫ್ ಹಾಗೂ ಆನೇಕಲ್ ಮೂಲದ ಶೇಖ್ ರಫೀಕ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಜೀವಂತ ಉಡವನ್ನು ವಶಪಡಿಸಿಕೊಳ್ಳಲಾಗಿದೆ.
ಅಪರೂಪದ ವನ್ಯಜೀವಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA