ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದ ಗೋಪಿನಾಥಂ ವಲಯದಲ್ಲಿ ಜಿಂಕೆ ಬೇಟೆಯಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗೋಪಿನಾಥಂ ಗ್ರಾಮದ ನಿವಾಸಿ ಮಣಿ ಬಂಧಿತ ಆರೋಪಿ. ದಾಳಿ ವೇಳೆ ಕಾರ್ಯಾಚರಣೆಯ ಸುಳಿವು ಅರಿತ ಮತ್ತೈವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಪಾಲು ಮಾಡಿಕೊಳ್ಳುವಾಗ ದಾಳಿ:
ಕಾಡಿನಲ್ಲಿ ಜಿಂಕೆಯನ್ನು ಬೇಟೆಯಾಡಿ, ಅದರ ಮಾಂಸವನ್ನು ಪಾಲು ಮಾಡಿಕೊಳ್ಳುತ್ತಿದ್ದ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಮಣಿಯನ್ನು ಮಾಂಸ ಸಮೇತ ವಶಕ್ಕೆ ಪಡೆಯಲಾಗಿದ್ದು, ತಪ್ಪಿಸಿಕೊಂಡು ಓಡಿಹೋಗಿರುವ ಐವರು ಆರೋಪಿಗಳಿಗಾಗಿ ಅರಣ್ಯ ಇಲಾಖೆ ತೀವ್ರ ಹುಡುಕಾಟ ನಡೆಸುತ್ತಿದೆ.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA
Related posts
