ಚಾಮರಾಜನಗರ: ಮಲೆಮಹದೇಶ್ವರಬೆಟ್ಟದ ಪೊನ್ನಾಚಿ ಅರಣ್ಯ ವಲಯದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಫಾರೆಸ್ಟ್ ವಾಚರ್ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಹದೇಶ್ವರ ಬೆಟ್ಟದ ಹುಲಿಗೂಡು ಗ್ರಾಮದ ನಿವಾಸಿ ಮಹದೇವಸ್ವಾಮಿ (48) ಮೃತಪಟ್ಟ ಫಾರೆಸ್ಟ್ ವಾಚರ್.
ಘಟನೆಯ ವಿವರ:
ಕಳ್ಳಬೇಟೆ ತಡೆ ಶಿಬಿರದಲ್ಲಿ (Anti-Poaching Camp) ಫಾರೆಸ್ಟ್ ವಾಚರ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಹದೇವಸ್ವಾಮಿ ಅವರು ಹುಣಸೆ ಬಯಲು ಅರಣ್ಯ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಕಾಡಾನೆ ದಾಳಿ ನಡೆಸಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA