Share News

ಚಿಕ್ಕಬಳ್ಳಾಪುರ: ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಬೈಕ್ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ನಿವಾಸಿ ಸೈಯದ್ ಯಾಸಿನ್ ಪಾಷಾ (29) ಎಂದು ಗುರುತಿಸಲಾಗಿದೆ. ಈತ ಶಿಡ್ಲಘಟ್ಟ ಸೇರಿದಂತೆ ವಿವಿಧೆಡೆ ಬೈಕ್ ಕಳ್ಳತನ ಕೃತ್ಯಗಳಲ್ಲಿ ತೊಡಗಿದ್ದ ಎನ್ನಲಾಗಿದೆ.

ಇತ್ತೀಚೆಗೆ ಶಿಡ್ಲಘಟ್ಟದ ಆಸ್ಪತ್ರೆಯೊಂದರ ಬಳಿ ಬೈಕ್ ಕಳ್ಳತನವಾಗಿರುವ ಬಗ್ಗೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಸೆರೆಹಿಡಿದಿದ್ದಾರೆ.

ಬಂಧಿತನಿಂದ ಅಂದಾಜು ಲಕ್ಷಾಂತರ ರೂಪಾಯಿ ಮೌಲ್ಯದ 5 ಬೈಕ್ ಕಳ್ಳತನದ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರ ವಾಹನಗಳನ್ನೇ ಗುರಿಯಾಗಿಸಿಕೊಂಡು ಈತ ಕಳ್ಳತನ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

​ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡದ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

 


Share News