Share News

ಚಿಕ್ಕಬಳ್ಳಾಪುರ: ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಅತಿವೇಗವಾಗಿ ವಾಹನ ಚಲಾಯಿಸುತ್ತಿದ್ದ ಚಾಲಕರ ವಿರುದ್ಧ ಚಿಕ್ಕಬಳ್ಳಾಪುರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದ್ದಾರೆ.

​ಅತಿವೇಗ ಹಾಗೂ ಅಜಾಗರೂಕ ಚಾಲನೆಯಿಂದ ಸಂಭವಿಸುವ ರಸ್ತೆ ಅಪಘಾತಗಳು ಮತ್ತು ಪ್ರಾಣಹಾನಿಯನ್ನು ತಡೆಯುವ ಉದ್ದೇಶದಿಂದ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯ ವೇಳೆ ನಿಯಮಬಾಹಿರವಾಗಿ ಚಾಲನೆ ಮಾಡುತ್ತಿದ್ದ ಚಾಲಕರಿಗೆ ದಂಡ ವಿಧಿಸಿದ ಪೊಲೀಸರು, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಹೇಳಿದರು.

​ವೇಗದ ಮಿತಿಯೊಳಗೆ ವಾಹನ ಚಲಾಯಿಸುವುದು ತಮ್ಮ ಹಾಗೂ ಇತರ ರಸ್ತೆ ಬಳಕೆದಾರರ ಸುರಕ್ಷತೆಗೆ ಅಗತ್ಯ ಎಂದು ಚಾಲಕರಿಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ಮುಂದಿನ ದಿನಗಳಲ್ಲಿಯೂ ಅತಿವೇಗ ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಇಂತಹ ಕಟ್ಟುನಿಟ್ಟಿನ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಸಂಚಾರ ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದಾರೆ.


Share News