Share News

ಚಿಕ್ಕೋಡಿ: ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಬರೋಬ್ಬರಿ 29 ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದಾರೆ.

​ಚಿಕ್ಕೋಡಿ ತಹಶೀಲ್ದಾರ್ ರಾಜೇಶ ಬುರ್ಲಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸಾರ್ವಜನಿಕರಿಗೆ ಸಬ್ಸಿಡಿ ದರದಲ್ಲಿ ದೊರೆಯುವ ಗೃಹಬಳಕೆ ಸಿಲಿಂಡರ್‌ಗಳನ್ನು ಹೋಟೆಲ್ ಮತ್ತು ಢಾಬಾಗಳಲ್ಲಿ ಕಾನೂನುಬಾಹಿರವಾಗಿ ಬಳಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.

​ಕಟ್ಟುನಿಟ್ಟಿನ ಎಚ್ಚರಿಕೆ:

ಗೃಹಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಚಟುವಟಿಕೆಗೆ ಬಳಸುವುದು ಸಂಪೂರ್ಣ ನಿಯಮಬಾಹಿರ. ಹೋಟೆಲ್ ಹಾಗೂ ಢಾಬಾ ಮಾಲೀಕರು ಕಡ್ಡಾಯವಾಗಿ ಅಧಿಕೃತ ವಾಣಿಜ್ಯ (ಕಮರ್ಷಿಯಲ್) ಎಲ್‌ಪಿಜಿ ಸಿಲಿಂಡರ್‌ಗಳನ್ನೇ ಬಳಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ  ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ತಹಶೀಲ್ದಾರ್ ರಾಜೇಶ ಬುರ್ಲಿ ಎಚ್ಚರಿಸಿದ್ದಾರೆ.

​ಈ ದಾಳಿ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ಶಿರಸ್ತೆದಾರ ಹಣಮಂತ ಕಾಂಡೆಕರ, ಆಹಾರ ನಿರೀಕ್ಷಕಿ ಐಶ್ವರ್ಯ ದಿವಟೆ ಹಾಗೂ ಇಲಾಖೆಯ ಇತರ ಸಿಬ್ಬಂದಿ ಪಾಲ್ಗೊಂಡಿದ್ದರು.


Share News