ಚಿತ್ರದುರ್ಗ (ಮೊಳಕಾಲ್ಮೂರು): ತಾಲೂಕಿನ ವಲಯ ಅರಣ್ಯ ಅಧಿಕಾರಿ (RFO) ಶ್ರೀಯುತ ಹರ್ಷ ಅವರ ವರ್ಗಾವಣೆಯ ಹಿನ್ನೆಲೆಯಲ್ಲಿ ಇಲಾಖೆಯ ಸಿಬ್ಬಂದಿ, ವನಪಾಲಕರು ಹಾಗೂ ಸಾರ್ವಜನಿಕರು ಅತ್ಯಂತ ಭಾವನಾತ್ಮಕವಾಗಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಂಡಿದ್ದರು.
ತಮ್ಮ ನೆಚ್ಚಿನ ಹಾಗೂ ದಕ್ಷ ಅಧಿಕಾರಿಯ ಅಗಲಿಕೆಯಿಂದ ಭಾವುಕರಾದ ಸಿಬ್ಬಂದಿ ಹಾಗೂ ವನಪಾಲಕರು ಕಣ್ಣೀರಿಡುತ್ತಲೇ, ಅವರ ಮೇಲೆ ಹೂಮಳೆ ಸುರಿಸಿ ಗೌರವಪೂರ್ವಕವಾಗಿ ಬೀಳ್ಕೊಟ್ಟರು.
ಮಕ್ಕಳಂತೆ ಕಂಡ ಸಹೃದಯಿ ಅಧಿಕಾರಿ:
“ಅರಣ್ಯ ಸಂರಕ್ಷಣೆಯ ಜೊತೆಗೆ ತಮ್ಮ ಕೆಳಹಂತದ ಅಧಿಕಾರಿಗಳು ಹಾಗೂ ವನಪಾಲಕರನ್ನು ಸ್ವಂತ ಮಕ್ಕಳಂತೆ ಪ್ರೀತಿಯಿಂದ ಕಾಣುತ್ತಿದ್ದ ಸಹೃದಯಿ, ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯ ವರ್ಗಾವಣೆ ನಮಗೆ ಅತ್ಯಂತ ದುಃಖ ತಂದಿದೆ” ಎಂದು ವನಪಾಲಕರು ತಮ್ಮ ನೋವನ್ನು ತೋಡಿಕೊಂಡರು.
ಈ ವಿಶೇಷ ಬೀಳ್ಕೊಡುಗೆ ಸಮಾರಂಭದಲ್ಲಿ ಮೊಳಕಾಲ್ಮೂರು ತಾಲೂಕಿನ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ವನಪಾಲಕರು, ಆಫೀಸರ್ ಅವರ ಅಭಿಮಾನಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.