ಚಿತ್ರದುರ್ಗ : ರಾಜ್ಯಾದ್ಯಂತ ದಿನಾಂಕ 19.09.2026 ರಂದು ನಡೆಯಲಿರುವ ‘ರಾಷ್ಟ್ರೀಯ ಲೋಕ ಅದಾಲತ್’ ಆಯೋಜನೆ ಹಿನ್ನೆಲೆಯಲ್ಲಿ, ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಗೌರವನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಜಿ.ಡಿ. ಮಹಾವರ್ಕರ್ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು.
ಸಭೆಯ ಪ್ರಮುಖ ಚರ್ಚೆಗಳು:
ಪ್ರಕರಣಗಳ ವಿಲೇವಾರಿ: ಲೋಕ ಅದಾಲತ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥಪಡಿಸಬಹುದಾದ ರಾಜಿ ಪ್ರಕರಣಗಳು (Compoundable Cases), ಚೆಕ್ ಬೌನ್ಸ್ (N.I. Act) ಪ್ರಕರಣಗಳು ಹಾಗೂ ಲಘು ಅಪರಾಧ (Petty Cases) ಪ್ರಕರಣಗಳ ತ್ವರಿತ ವಿಲೇವಾರಿ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಸಮನ್ವಯತೆ: ನ್ಯಾಯಾಂಗ ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆ ಪರಸ್ಪರ ಸಹಯೋಗದೊಂದಿಗೆ ಸಾರ್ವಜನಿಕರ ಪ್ರಕರಣಗಳನ್ನು ರಾಜಿ ಮೂಲಕ ಬಗೆಹರಿಸಲು ಶ್ರಮಿಸುವಂತೆ ನಿರ್ದೇಶಿಸಲಾಯಿತು.
ಈ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶರು, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರುಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಹಲವು ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.