Share News

ದಾವಣಗೆರೆ: ನಗರದಲ್ಲಿ ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಕರ್ಕಶ ಶಬ್ದದ ಕಿರಿಕಿರಿ ಉಂಟುಮಾಡುತ್ತಿದ್ದ ಬೈಕ್‌ಗಳ ವಿರುದ್ಧ ಉತ್ತರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, 8 ಬುಲೆಟ್ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

​ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶೇಖರ್ ಹೆಚ್.ಟಿ. (ಐಪಿಎಸ್) ಅವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ನಗರ ಡಿವೈಎಸ್ಪಿ ಶರಣಬಸವೇಶ್ವರ ಹಾಗೂ ಸಂಚಾರ ವೃತ್ತ ನಿರೀಕ್ಷಕ ಮಂಜುನಾಥ ಅವರ ಮಾರ್ಗದರ್ಶನದಲ್ಲಿ ಪಿಎಸ್‍ಐ ಮಹಾದೇವ ಭತ್ತೆ ಹಾಗೂ ಸಿಬ್ಬಂದಿಗಳ ತಂಡ ಈ ದಿಢೀರ್ ದಾಳಿ ನಡೆಸಿದೆ.

​ಸೈಲೆನ್ಸರ್ ತೆರವು ಮತ್ತು ಕಟ್ಟುನಿಟ್ಟಿನ ಎಚ್ಚರಿಕೆ:

ವಶಪಡಿಸಿಕೊಂಡ ಎಲ್ಲಾ 8 ಬುಲೆಟ್ ಬೈಕ್‌ಗಳಲ್ಲಿದ್ದ ದೋಷಪೂರಿತ ಸೈಲೆನ್ಸರ್‌ಗಳನ್ನು ಪೊಲೀಸರು ಸ್ಥಳದಲ್ಲೇ ತೆರವುಗೊಳಿಸಿ, ಸಂಚಾರ ನಿಯಮ ಉಲ್ಲಂಘನೆಯಡಿ ದಂಡ ವಿಧಿಸಿದ್ದಾರೆ.

​ಒಮ್ಮೆ ದಂಡ ತೆತ್ತ ನಂತರವೂ ಮತ್ತೆ ನಿಯಮ ಮೀರಿ ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡು ಸಂಚರಿಸಿದರೆ, ಭಾರತೀಯ ಮೋಟಾರು ವಾಹನ ಕಾಯ್ದೆ ಕಲಂ 190(2) ರಂತೆ ನೇರವಾಗಿ ಪ್ರಕರಣ ದಾಖಲಿಸಲಾಗುವುದು. ಈ ಅಪರಾಧಕ್ಕೆ 3 ತಿಂಗಳ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಲು ಅವಕಾಶವಿದ್ದು, ಬೈಕ್ ಸವಾರರು ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕೆಂದು ಪೊಲೀಸರು ಎಚ್ಚರಿಸಿದ್ದಾರೆ.


Share News