Share News

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು ಕಮೀಷನ್ ರೂಪದಲ್ಲಿ ಬೃಹತ್ ಮೊತ್ತದ ಲಂಚ ಪಡೆಯುತ್ತಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರು ಗುರುವಾರ ₹50 ಲಕ್ಷ ನಗದು ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

​ಬಾಗಲಕೋಟೆ ಮೂಲದ ಡೆವಲಪರ್ ಮಂಜುನಾಥ್ ಎಂಬುವರು ಧಾರವಾಡ ತಾಲೂಕಿನ ಯರಿಕೊಪ್ಪ ಬಳಿ ಖರೀದಿಸಿದ್ದ ಒಂದು ಎಕರೆ ಜಮೀನಿನಲ್ಲಿನ ‘ಅ-ಖರಾಬ್’ ತೆರವುಗೊಳಿಸಿ ಅಭಿವೃದ್ಧಿಪಡಿಸಲು ಅನುಮತಿ ಕೋರಿದ್ದರು. ಈ ಕೆಲಸ ಮಾಡಿಕೊಡಲು ತಹಶೀಲ್ದಾರ್ ಸಚ್ಚಿದಾನಂದ ಅವರು ಬರೋಬ್ಬರಿ ₹1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

​ಈ ಪೈಕಿ ಮುಂಗಡ ಕಂತಾಗಿ ₹50 ಲಕ್ಷ ಹಣ ಪಡೆಯುತ್ತಿದ್ದಾಗ, ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್‌ ಅವರನ್ನು ನಗದಿನೊಂದಿಗೆ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಅವರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿಯ ಬಂಧನ ಪ್ರಕ್ರಿಯೆ ಹಾಗೂ ಹೆಚ್ಚಿನ ವಿಚಾರಣೆ ಮುಂದುವರಿದಿದೆ.


Share News