Share News

ಬೆಂಗಳೂರು: ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ರಾಜ್ಯದಲ್ಲಿ ವಿಪತ್ತು ನಿರ್ವಹಣೆ, ಅಗ್ನಿಶಾಮಕ ಹಾಗೂ ರಕ್ಷಣಾ ಕಾರ್ಯಗಳನ್ನು ಮತ್ತಷ್ಟು ಸಬಲಗೊಳಿಸಲು ಹಲವು ಪ್ರಮುಖ ನಿರ್ದೇಶನಗಳನ್ನು ನೀಡಲಾಗಿದೆ.

​ಇಲಾಖೆಯ ಪ್ರಗತಿ ಪರಿಶೀಲನೆ: ರಾಜ್ಯದಲ್ಲಿರುವ ಒಟ್ಟು 219 ಅಗ್ನಿಶಾಮಕ ಠಾಣೆಗಳ ಪ್ರಸ್ತುತ ಕಾರ್ಯನಿರ್ವಹಣೆಯ ಸ್ಥಿತಿಗತಿಯನ್ನು ಪರಿಶೀಲಿಸಿ, ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

​490 ಹುದ್ದೆಗಳ ಭರ್ತಿಗೆ ಸೂಚನೆ: ಖಾಲಿ ಇರುವ 490 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಆರ್ಥಿಕ ಇಲಾಖೆಯ ಸಮನ್ವಯದೊಂದಿಗೆ ತ್ವರಿತಗೊಳಿಸಲು ಹಾಗೂ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ.

​ಸ್ವಂತ ಕಟ್ಟಡಗಳ ನಿರ್ಮಾಣ: ಹುಬ್ಬಳ್ಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಾಡಿಗೆ ಅಥವಾ ಇತರೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಠಾಣೆಗಳ ಮಾಹಿತಿ ಪಡೆದು, ಸ್ವಂತ ಅಗ್ನಿಶಾಮಕ ಠಾಣೆಗಳ ನಿರ್ಮಾಣಕ್ಕೆ ಕ್ರಮ ವಹಿಸಲು ತಿಳಿಸಲಾಗಿದೆ.

​ವಸತಿ ಸೌಲಭ್ಯ ಹೆಚ್ಚಳ: ಸಿಬ್ಬಂದಿಗೆ ಅಗತ್ಯವಿರುವ ವಸತಿ ನಿವಾಸ ಸೌಲಭ್ಯಗಳನ್ನು ಶೇ. 50ರಷ್ಟು ಹೆಚ್ಚಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ.

​SDRF & ಗೃಹರಕ್ಷಕ ದಳ ಬಲವರ್ಧನೆ: ವಿಪತ್ತು ಸಂದರ್ಭಗಳಲ್ಲಿ ತ್ವರಿತ ಸ್ಪಂದನೆಗಾಗಿ SDRF ಸಾಮರ್ಥ್ಯ ಹೆಚ್ಚಿಸುವುದು ಹಾಗೂ ಗೃಹರಕ್ಷಕ ದಳವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ ವಿಸ್ತರಿಸಲು ತೀರ್ಮಾನಿಸಲಾಗಿದೆ.

​ರಾಜ್ಯದ ಪ್ರತಿಯೊಬ್ಬ ನಾಗರಿಕರ ಜೀವ ಮತ್ತು ಆಸ್ತಿಯ ರಕ್ಷಣೆ ಸರ್ಕಾರದ ಆದ್ಯತೆಯಾಗಿದ್ದು, ಅಗ್ನಿಶಾಮಕ, ವಿಪತ್ತು ನಿರ್ವಹಣೆ ಹಾಗೂ ಗೃಹರಕ್ಷಕ ದಳಗಳನ್ನು ಆಧುನಿಕ ಮತ್ತು ಜನಸ್ನೇಹಿಯಾಗಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹಮಂತ್ರಿಗಳು ತಿಳಿಸಿದರು.

 


Share News