Share News

ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಬಿಎಂ ಕಾವಲ್‌ನಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಒಬ್ಬ ಹೊರರಾಜ್ಯದ ವ್ಯಕ್ತಿ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು 855 ಗ್ರಾಂ ಚಿನ್ನಾಭರಣ, ಚಿನ್ನದ ಗಟ್ಟಿ ಮತ್ತು ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ಅಂದಾಜು 1,15,62,000ರೂ. ಎಂದು ತಿಳಿದುಬಂದಿದೆ.

ಆರೋಪಿಗಳ ವಿಚಾರಣೆಯಿಂದ ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದಿದ್ದ ಪ್ರಕರಣಗಳು ಬೆಳಕಿಗೆ ಬಂದಿವೆ. ಇಂದಿರಾನಗರದ 6 ಪ್ರಕರಣಗಳು, ಜೀವನ್‌ಭೀಮಾನಗರದ 5 ಪ್ರಕರಣಗಳು, ಹೆಚ್ಎಸ್ಆರ್ ಲೇಔಟ್ನಲ್ಲಿ 5 ಪ್ರಕರಣಗಳು, ಬಾಣಸವಾಡಿಯ 1 ಪ್ರಕರಣಗಳು ಮತ್ತು ರಾಮಮೂರ್ತಿನಗರದ 1 ಪ್ರಕರಣಗಳು ಸೇರಿದಂತೆ ಒಟ್ಟಾರೆಯಾಗಿ 18 ಮನೆಗಳ್ಳತನ ಪತ್ತೆಯಾಗಿವೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಕಾರ್ಯಾಚರಣೆಯ ಮೂಲಕ ಪತ್ತೆಹಚ್ಚಲಾಗಿದೆ. ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಾ.ವಿಕ್ರಮ್ ಅಮಟೆ ಅವರ ಮಾರ್ಗದರ್ಶನದಲ್ಲಿ ಹಾಗೂ ಇಂದಿರಾನಗರ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಸುದರ್ಶನ್ ಹೆಚ್ ವಿ ಮತ್ತು ತಂಡದವರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್


Share News