Share News

ಕಲಬುರಗಿ: ಸದ್ಭಾವನಾ ದಿನಾಚರಣೆಯ ಅಂಗವಾಗಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಆವರಣದಲ್ಲಿ ಇಂದು ವಿಶೇಷ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿತ್ತು.

​ಕಾರ್ಯಕ್ರಮದಲ್ಲಿ ಕಲಬುರಗಿ ನಗರದ ಉಪ ಪೊಲೀಸ್ ಆಯುಕ್ತರಾದ (ಕಾನೂನು ಮತ್ತು ಸುವ್ಯವಸ್ಥೆ) ಶ್ರೀಮತಿ ಶಾಲೂ (ಐಪಿಎಸ್) ಅವರು ಭಾಗವಹಿಸಿ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಲಿಪಿಕ ವರ್ಗದ ನೌಕರರಿಗೆ ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

​ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೊಲೀಸ್ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸಮಾಜದಲ್ಲಿ ಸದ್ಭಾವನೆ, ಏಕತೆ, ಶಾಂತಿ ಮತ್ತು ಪರಸ್ಪರ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ದೃಢ ಪ್ರತಿಜ್ಞೆ ಸ್ವೀಕರಿಸಿದರು.

​ನಾಡು ಹಾಗೂ ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರುವ ಮೂಲಕ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.


Share News