ಕನಕಪುರ: ಕಾರಿನಲ್ಲಿ ಡ್ರಾಪ್ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರನ್ನು ಕರೆದೊಯ್ದು, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ದೋಚಿದ್ದ ನಾಲ್ವರು ಖತರ್ನಾಕ್ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭೈರೇಶ್ ಅಲಿಯಾಸ್ ಚಿನ್ನು, ಗಗನ್, ಶಶಾಂಕ್ ಹಾಗೂ ಮುತ್ತುರಾಜ್ ಬಂಧಿತ ಆರೋಪಿಗಳು.
ಘಟನೆಯ ವಿವರ:
ಪಟ್ಟಣದ ಕೆಎನ್ಎಸ್ (KNS) ಸರ್ಕಲ್ ಬಳಿ ವ್ಯಕ್ತಿಯೊಬ್ಬರಿಗೆ ಕಾರಿನಲ್ಲಿ ಡ್ರಾಪ್ ಕೊಡುವುದಾಗಿ ಹೇಳಿ ಆರೋಪಿಗಳು ತಮ್ಮ ವಾಹನದಲ್ಲಿ ಕರೆದೊಯ್ದಿದ್ದಾರೆ. ತದನಂತರ ಮಾರ್ಗಮಧ್ಯೆ ಅವರ ಮೇಲೆ ಹಲ್ಲೆ ನಡೆಸಿ, ಅವರ ಬಳಿಯಿದ್ದ ನಗದು ಹಣ ಮತ್ತು ಮೊಬೈಲ್ ಫೋನ್ ದೋಚಿ ಪರಾರಿಯಾಗಿದ್ದರು.
ಬಂಧಿತ ಆರೋಪಿಗಳಿಂದ ₹4,800 ನಗದು, 1 ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA